ಬೆಂಗಳೂರು: ಆರ್ಯವರ್ಧನ ಗುರೂಜಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಬೆಂಗಳೂರಿನ ಶಂಕರಪುರಂ ಪೊಲೀಸ್ ಠಾಣೆಯಲ್ಲಿ ಆರ್ಯವರ್ಧನ ಗುರೂಜಿ ವಿರುದ್ಧ ಕರ್ನಾಟಕ ಗೋವು ರಕ್ಷಕರ ದೂರಿನ ಮೇರೆಗೆ ಎಫ್ಐಆರ್ ದಾಖಲಿಸಲಾಗಿದೆ.
ದೇವರ ಬಗ್ಗೆ ಅವಹೇಳನಕಾರಿ ಹೇಳಿಕೆ, ಮಹಿಳೆಯರ ಗೌರವಕ್ಕೆ ಧಕ್ಕೆ ತರುವಂತಹ ರೀತಿ ಆರ್ಯವರ್ಧನ ಗುರೂಜಿ ಹೇಳಿಕೆ ನೀಡಿದ್ದಾರೆ. ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ಕ್ರಮಕ್ಕೆ ಒತ್ತಾಯಿಸಿ ದೂರು ನೀಡಲಾಗಿದೆ. ಸಂದರ್ಶನದಲ್ಲಿ ಲಕ್ಷ್ಮಿ ದೇವತೆಯ ಬಗ್ಗೆ ಆರ್ಯವರ್ಧನ ಗುರೂಜಿ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಮಾನವನ ಅಂಗಕ್ಕೆ ಲಕ್ಷ್ಮಿಯನ್ನು ಹೋಲಿಸಿ ಹೇಳಿಕೆ ನೀಡಿದ್ದರು. ಅಲ್ಲದೆ ಆ ಅಂಗಾಂಗಕ್ಕೆ ಪೂಜೆ ಮಾಡಬೇಕು ಎಂದು ಹೇಳಿದ್ದರು.
ಜಾಲತಾಣದಲ್ಲಿ ಅವರ ಹೇಳಿಕೆಯ ವಿಡಿಯೋ ವೈರಲ್ ಆಗಿದೆ. ಸಾಮಾಜಿಕ ಜಾಲತಾಣದಲ್ಲಿನ ವಿಡಿಯೋ ಆಧಾರದಲ್ಲಿ ಕರ್ನಾಟಕ ಗೋವು ರಕ್ಷಕರು ಶಂಕರಪುರಂ ಠಾಣೆಗೆ ದೂರು ನೀಡಿದ್ದರು. ದೂರು ಪರಿಶೀಲಿಸಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಬೆಂಗಳೂರಿನ ಶಂಕರಪುರಂ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

