BREAKING : ತೀವ್ರಗೊಂಡ ‘ಮುಡಾ’ ಹಗರಣದ ತನಿಖೆ : ಲೋಕಾಯುಕ್ತ ವಿಚಾರಣೆಗೆ ಹಾಜರಾದ CM ಸಿದ್ದರಾಮಯ್ಯ ಪತ್ನಿ ‘ಪಾರ್ವತಿ’ ..!

ಬೆಂಗಳೂರು : ಮುಡಾ ಹಗರಣದ ತನಿಖೆ ತೀವ್ರಗೊಂಡಿದ್ದು, ಲೋಕಾಯುಕ್ತ ಅಧಿಕಾರಿಗಳು ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರನ್ನು ವಿಚಾರಣೆಗೊಳಪಡಿಸಿದ್ದಾರೆ.

ಸುಮಾರು 3 ಗಂಟೆಗಳ ಕಾಲ ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ಬಹಳ ಗೌಪ್ಯವಾಗಿ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರನ್ನು ವಿಚಾರಣೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.ಮುಡಾ ಹಗರಣದಲ್ಲಿ ಲೋಕಾಯುಕ್ತ ನೋಟಿಸ್ ಬಂದ ಹಿನ್ನೆಲೆ ಅವರು ವಿಚಾರಣೆಗೆ ಹಾಜರಾಗಿದ್ದಾರೆ. ಮುಡಾ ಹಗರಣದಲ್ಲಿ  ಪಾರ್ವತಿ ಎ-2 ಆರೋಪಿಯಾಗಿದ್ದಾರೆ.

ಮುಡಾ’ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಮತ್ತು ಕುಟುಂಬದವರ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು.ಎಫ್ ಐ ಆರ್ ನಲ್ಲಿ ಸಿಎಂ ಸಿದ್ದರಾಮಯ್ಯ ಎ-1, ಪತ್ನಿ ಪಾರ್ವತಿ ಎ-2 ಎಂದು ಹೆಸರಿಸಲಾಗಿದೆ. ಹಾಗೆಯೇ ಸಿಎಂ ಸಿದ್ದರಾಮಯ್ಯ ಎ1, ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಎ 2, ಸಹೋದರ ಮಲ್ಲಿಕಾರ್ಜುನ ಸ್ವಾಮಿ ಎ 3, ಜಮೀನು ಮಾರಿದ ದೇವರಾಜು ಎ-4 ಆರೋಪಿ ಎಂದು ಗುರುತಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read