HomeKarnatakaBREAKING : ಅಂತರಾಷ್ಟ್ರೀಯ ಖ್ಯಾತಿಯ ಚಿತ್ರ ಕಲಾವಿದ 'ವಿಜಯ ಸಿಂಧೂರ್' ಇನ್ನಿಲ್ಲ |Vijaya Sindhoor

BREAKING : ಅಂತರಾಷ್ಟ್ರೀಯ ಖ್ಯಾತಿಯ ಚಿತ್ರ ಕಲಾವಿದ ‘ವಿಜಯ ಸಿಂಧೂರ್’ ಇನ್ನಿಲ್ಲ |Vijaya Sindhoor

ಬೆಂಗಳೂರು : ಅಂತರಾಷ್ಟ್ರೀಯ ಖ್ಯಾತಿಯ ಹಿರಿಯ ಕಲಾವಿದ ವಿಜಯ ಸಿಂಧೂರ್ ವಿಧಿವಶರಾಗಿದ್ದಾರೆ.
ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದ ವಿಜಯ್ ಸಿಂಧೂರ್ ಜಮಖಂಡಿಯ ಸ್ವಗೃಹದಲ್ಲಿ ಮುಂಜಾನೆ ನಿಧನರಾಗಿದ್ದಾರೆ. ಅವರಿಗೆ ಕರ್ನಾಟಕ ಸರ್ಕಾರದ ವರ್ಣಶಿಲ್ಪಿ ವೆಂಕಟಪ್ಪ ಇಂದ್ರ ಲಲಿತ ಕಲಾ ಅಕಾಡೆಮಿ ಪ್ರಶಸ್ತಿ ಬಂದಿವೆ.

ವಿಜಯ ಸಿಂಧೂರ ಅವರು 1940ರ ಜೂನ್ 7ರಂದು ಬಿಜಾಪುರ ಜಿಲ್ಲೆಯ ಬನಹಟ್ಟಿಯಲ್ಲಿ ಜನಿಸಿದರು. ತಂದೆ ಗಂಗಪ್ಪ. ತಾಯಿ ಬಸಮ್ಮ. ಬಾಲ್ಯದಿಂದಲೇ ಅವರು ಚಿತ್ರಕಲೆಯಲ್ಲಿ ಬಹಳ ಆಸಕ್ತ ವಹಿಸಿದ್ದರು. ಇಂಜಿನಿಯರ್ ಅಥವಾ ಡಾಕ್ಟರ್ ಆಗಬೇಕೆಂದು ಅಂದುಕೊಂಡಿದ್ದ ಅವರ ಮನಸ್ಸು ಚಿತ್ರಕಲೆಯತ್ತ ಸೆಳೆಯಿತು.

ವಿಜಯ ಸಿಂಧೂರ ಅವರಿಗೆ ಬಾಂಬೆ ಆರ್ಟ್ ಸೊಸೈಟಿ ಪ್ರಶಸ್ತಿ, ಆರ್ಟ್ ಸೊಸೈಟಿ ಆಫ್ ಇಂಡಿಯಾದ ಪಟೇಲ್ ಟ್ರೋಫಿ, ಕೇಂದ್ರ ಲಲಿತ ಕಲಾ ಅಕಾಡಮಿ ಪ್ರಶಸ್ತಿ, ಕೋಲ್ಕತ್ತಾದ ಅಖಿಲ ಭಾರತ ಕಲಾ ಪ್ರದರ್ಶನ ಪ್ರಶಸ್ತಿ, ರಾಜ್ಯ ಲಲಿತ ಕಲಾ ಅಕಾಡಮಿ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ ಮುಂತಾದ ಅನೇಕ ಗೌರವಗಳು ಲಭಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular