BREAKING : ವಿಧಾನಸೌಧದಲ್ಲಿ ‘ಪಾಕಿಸ್ತಾನ್ ಜಿಂದಾಬಾದ್’ ಕೂಗಿದ್ದು ‘FSL’ ವರದಿಯಲ್ಲಿ ಧೃಡ : ಬಿಜೆಪಿ

ಬೆಂಗಳೂರು : ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಕೂಗಿದ್ದು ನಿಜ , FSL ವರದಿಯಲ್ಲಿ ಇದು ಧೃಡವಾಗಿದೆ ಎಂದು ರಾಜ್ಯ ಬಿಜೆಪಿ ಟ್ವೀಟ್ ಮೂಲಕ ಮಾಹಿತಿ ನೀಡಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ ‘ಸತ್ಯವನ್ನೇ ತಿರುಚಿ ಸುಳ್ಳು ಮಾಡಿ ಪ್ರಚಾರ ಮಾಡಿದ ಕಾಂಗ್ರೆಸ್ಸಿಗರೇ ಸುಳ್ಳು ಸುದ್ದಿಗಳ ಸೃಷ್ಟಿಕರ್ತರು ಎಂಬುದನ್ನು ವೈಜ್ಞಾನಿಕ ವರದಿ ಬಹಿರಂಗಪಡಿಸಿದೆ’.

‘ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ್ದನ್ನು “ನಾಸೀರ್ ಸಾಬ್ ಜಿಂದಾಬಾದ್” ಎಂದು ತಿರುಚಿ ಕನ್ನಡಿಗರಿಗೆ ಟೋಪಿ ಹಾಕಲು ಹೊರಟ ಹುನ್ನಾರ ಈಗ FSL ವರದಿಯಲ್ಲಿ ಬಟಾ ಬಯಲಾಗಿದೆ. ರಾಷ್ಟ್ರ ವಿರೋಧಿ ಧೋರಣೆಯ  ಕಾಂಗ್ರೆಸ್ ಹಾಗೂ ಸುಳ್ಳು ಸುದ್ದಿ ಕಾರ್ಖಾನೆಯ ಮುಖ್ಯಸ್ಥರಾದ ಪ್ರಿಯಾಂಕ್ ಖರ್ಗೆ ಅವರು ಈಗಲಾದರೂ ತಮ್ಮ ದೇಶದ್ರೋಹದ ಕೃತ್ಯವನ್ನು ಒಪ್ಪಿಕೊಂಡು ವಿಧಾನಸೌಧದ ಎದುರು ಸಾಷ್ಟಾಂಗ ನಮಸ್ಕಾರ ಮಾಡಿ ಕನ್ನಡಿಗರ ಕ್ಷಮೆ ಕೋರಬೇಕು’ ಎಂದು ಬಿಜೆಪಿ ಆಗ್ರಹಿಸಿದೆ.

https://twitter.com/BJP4Karnataka/status/1764494815536836826

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read