BREAKING : ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ 15 ಕಡೆ ‘IT’ ದಾಳಿ

ಬೆಂಗಳೂರು : ಬೆಂಗಳೂರಲ್ಲಿ 15  ಕ್ಕೂ ಹೆಚ್ಚು ಕಡೆ ಐಟಿ ( IT officers) ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಚಿನ್ನದ ವ್ಯಾಪಾರಿಗಳು, ಮನೆ, ಕಚೇರಿ ಸೇರಿದಂತೆ ಹಲವು ಕಡೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಡಾಲರ್ಸ್ ಕಾಲೋನಿ, ಮತ್ತಿಕೆರೆ ಸೇರಿದಂತೆ ಹಲವು ಕಡೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ತೆರಿಗೆ ವಂಚನೆ ಹಿನ್ನೆಲೆ ಐಟಿ ಅಧಿಕಾರಿಗಳು ದಾಳಿ  ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಮುಳ್ಳೂರು, ಆರ್ಎಂವಿ ಎಕ್ಸ್ಟೆಕ್ಷನ್, ಬಿಇಎಲ್ ಸರ್ಕಲ್, ಮಲ್ಲೇಶ್ವರಂ, ಡಾಲರ್ಸ್ ಕಾಲೋನಿ ಸೇರಿದಂತೆ 15ಕ್ಕೂ ಹೆಚ್ಚು ಕಡೆ ದಾಳಿ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ.   ಖಾಸಗಿ ಕಂಪನಿಗಳ ಮಾಲೀಕರು ಹಾಗೂ ಚಿನ್ನದ ವ್ಯಾಪಾರಿಗಳ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ. ಇತ್ತೀಚೆಗೆ ಬಿರಿಯಾನಿ ಸೆಂಟರ್ ಗಳ ಮೇಲೆ ದಾಳಿ ನಡೆಸಿದ್ದ ಅಧಿಕಾರಿಗಳು ಇದೀಗ ಚಿನ್ನದ ವ್ಯಾಪಾರಿ, ಕಚೇರಿ ಮಾಲೀಕರಿಗೆ ಶಾಕ್ ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read