ನವದೆಹಲಿ: ಅಸ್ಸಾಂ, ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆ ಮತ ಎಣಿಕೆ ಆರಂಭವಾಗುತ್ತಿದ್ದಂತೆ ದೆಹಲಿಯ ಬಿಜೆಪಿ ಪ್ರಧಾನ ಕಛೇರಿ ಜಿಲೇಬಿ ಸಿದ್ಧಪಡಿಸಲಾಗುತ್ತಿದೆ.
ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ ಬಿಜೆಪಿ ಭಾರಿ ಮುನ್ನಡೆ ಗಳಿಸಿದ್ದು, ಬಹುಮತದತ್ತ ದಾಪುಗಾಲು ಹಾಕಿದೆ. ಐದು ರಾಜ್ಯಗಳ ಏಳು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಮತಎಣಿಕೆ ಕೂಡ ಇಂದು ನಡೆಯುತ್ತಿದೆ. ಭರ್ಜರಿ ಗೆಲುವಿನ ನಿರೀಕ್ಷೆಯಲ್ಲಿ ಬಿಜೆಪಿ ಕಚೇರಿಯಲ್ಲಿ ಜಿಲೇಬಿ ಸಿದ್ಧಪಡಿಸಲಾಗುತ್ತಿದೆ.
ಮಧ್ಯಾಹ್ನದ ವೇಳೆಗೆ ಚುನಾವಣೆ ಫಲಿತಾಂಶದ ಸ್ಪಷ್ಟ ಚಿತ್ರಣ ಸಿಗಲಿದ್ದು, ಸಂಭ್ರಮಾಚರಣೆ ಜೊತೆಗೆ ಸಿಹಿ ಹಂಚಲು ಬಿಜೆಪಿ ತಯಾರಿ ಮಾಡಿಕೊಂಡಿದೆ. ಇದಕ್ಕಾಗಿ ಬಾಣಸಿಗರು ಜಿಲೇಬಿ ಸಿದ್ಧಪಡಿಸತೊಡಗಿದ್ದಾರೆ.

