HomeIndiaBREAKING : ಅಮಿತ್ ಶಾ ವಿರುದ್ಧ ಅವಹೇಳನಕಾರಿ ಹೇಳಿಕೆ : ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿ...

BREAKING : ಅಮಿತ್ ಶಾ ವಿರುದ್ಧ ಅವಹೇಳನಕಾರಿ ಹೇಳಿಕೆ : ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಜಾರ್ಖಂಡ್ ಹೈಕೋರ್ಟ್

ನವದೆಹಲಿ : 2018 ರಲ್ಲಿ ಆಗಿನ ಬಿಜೆಪಿ ಅಧ್ಯಕ್ಷ ಅಮಿತ್ ಶಾ ವಿರುದ್ಧ ರಾಹುಲ್ ಗಾಂಧಿ ನೀಡಿದ ಹೇಳಿಕೆಗೆ ಸಂಬಂಧಿಸಿದ ಪ್ರಕರಣವನ್ನು ಕೊನೆಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಜಾರ್ಖಂಡ್ ಹೈಕೋರ್ಟ್ ಶುಕ್ರವಾರ ತಿರಸ್ಕರಿಸಿದೆ.

ಅಮಿತ್‌ ಶಾ ವಿರುದ್ಧದ ಅವಹೇಳನಿಕಾರಿ  ಹೇಳಿಕೆ ಪ್ರಕರಣದಲ್ಲಿ ಸಿವಿಲ್ ನ್ಯಾಯಾಲಯವು ರಾಹುಲ್‌  ಗಾಂಧಿ ವಿರುದ್ಧ ಸಮನ್ಸ್ ಹೊರಡಿಸಿತ್ತು. ಈ ಪ್ರಕರಣವನ್ನು ಕೊನೆಗೊಳಿಸುವಂತೆ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು.

2018ರ ಮಾರ್ಚ್ 18ರಂದು ನಡೆದ ಎಐಸಿಸಿ ಮಹಾಧಿವೇಶನದಲ್ಲಿ ರಾಹುಲ್ ಗಾಂಧಿ ಬಿಜೆಪಿ ವಿರುದ್ಧ ಭಾಷಣ ಮಾಡಿ, ಅಮಿತ್ ಶಾ ಅವರನ್ನು ಕೊಲೆ ಆರೋಪಿ ಎಂದು ಬಿಂಬಿಸಿದ್ದರು ಎಂದು ಆರೋಪಿಸಿ ಬಿಜೆಪಿ ನಾಯಕ ನವೀನ್ ಝಾ ದೂರು ದಾಖಲಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular