HomeKarnatakaBREAKING : ಜೂ. 10 ರವರೆಗೆ ಸಂಸದ ಪ್ರಜ್ವಲ್ ರೇವಣ್ಣ 'SIT' ಕಸ್ಟಡಿಗೆ, ಕೋರ್ಟ್ ಆದೇಶ..!

BREAKING : ಜೂ. 10 ರವರೆಗೆ ಸಂಸದ ಪ್ರಜ್ವಲ್ ರೇವಣ್ಣ ‘SIT’ ಕಸ್ಟಡಿಗೆ, ಕೋರ್ಟ್ ಆದೇಶ..!

ಬೆಂಗಳೂರು : ಜೂನ್ 10 ರವರೆಗೆ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಎಸ್ ಐ ಟಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಪ್ರಜ್ವಲ್ ರೇವಣ್ಣ ಅವರನ್ನು ಎಸ್ ಐ ಟಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

ಇಂದು ಪ್ರಜ್ವಲ್ ಕಸ್ಟಡಿ ಅಂತ್ಯಗೊಳ್ಳಲಿದ್ದು, ಈ ಹಿನ್ನೆಲೆ ಅವರನ್ನು ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ಕೋರ್ಟ್    ಜೂ.10 ರವರೆಗೆ ಎಸ್ ಐ ಟಿ ಕಸ್ಟಡಿಗೆ ನೀಡಿದೆ.  ಪ್ರಜ್ವಲ್ ರೇವಣ್ಣರನ್ನು 1 ವಾರ ಅಂದರೆ ಜೂನ್ 6 ವರೆಗೆ ಎಸ್ ಐ ಟಿ ಕಸ್ಟಡಿಗೆ ನೀಡಿ ಬೆಂಗಳೂರಿನ 42 ಎಸಿಎಂಎಂ ಕೋರ್ಟ್ ಇತ್ತೀಚೆಗೆ ಆದೇಶ ಹೊರಡಿಸಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಸಂಸದ ಪ್ರಜ್ವಲ್ ರೇವಣ್ಣ ಒಂದು ತಿಂಗಳ ನಂತರ ವಿದೇಶದಿಂದ ಆಗಮಿಸಿದ್ದು, ದೇವನಹಳ್ಳಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಜ್ವಲ್ ರೇವಣ್ಣ ಅವರನ್ನು ಎಸ್ಐಟಿ ಬಂಧಿಸಿದೆ.ನಂತರ ಪ್ರಜ್ವಲ್ ರೇವಣ್ಣರನ್ನ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ ಎಸ್ ಐ ಟಿ ಸಿವಿಲ್ ಕೋರ್ಟ್ ಗೆ ಹಾಜರುಪಡಿಸಿತ್ತು.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular