HomeIndiaBREAKING : ಏ.15 ರವರೆಗೆ ಸಿಎಂ 'ಅರವಿಂದ್ ಕೇಜ್ರಿವಾಲ್' ಗೆ ನ್ಯಾಯಾಂಗ ಬಂಧನ, ತಿಹಾರ್ ಜೈಲಿಗೆ...

BREAKING : ಏ.15 ರವರೆಗೆ ಸಿಎಂ ‘ಅರವಿಂದ್ ಕೇಜ್ರಿವಾಲ್’ ಗೆ ನ್ಯಾಯಾಂಗ ಬಂಧನ, ತಿಹಾರ್ ಜೈಲಿಗೆ ಶಿಫ್ಟ್..!

ನವದೆಹಲಿ: ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ಸಿಎಂ ಕೇಜ್ರಿವಾಲ್ ಗೆ ಏ.15 ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ದೆಹಲಿಯ ತಿಹಾರ್ ಜೈಲಿಗೆ ಶಿಫ್ಟ್ ಮಾಡಲಾಗಿದೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ರೂಸ್ ಅವೆನ್ಯೂ ನ್ಯಾಯಾಲಯ ಯಾವುದೇ ಪರಿಹಾರ ನೀಡಿಲ್ಲ. ಕೇಜ್ರಿವಾಲ್ ಅವರ ‘ಅಸಹಕಾರ ವರ್ತನೆ’ಯನ್ನು ಉಲ್ಲೇಖಿಸಿ ಜಾರಿ ನಿರ್ದೇಶನಾಲಯ (ಇಡಿ) ಅವರನ್ನು ಹದಿನೈದು ದಿನಗಳ ನ್ಯಾಯಾಂಗ ಬಂಧನಕ್ಕೆ ಕೋರಿತ್ತು. ಸಿಎಂ ಅವರ ಕಸ್ಟಡಿ ಸೋಮವಾರ ಕೊನೆಗೊಂಡಿದ್ದರಿಂದ ಅವರನ್ನು ರೂಸ್ ಅವೆನ್ಯೂ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ವಿಚಾರಣೆ ನಡೆಸಿದ ಕೋರ್ಟ್ ಏ.15 ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ.

ಮಾರ್ಚ್ 21ರಂದು ಕೇಜ್ರಿವಾಲ್ ಅವರನ್ನು ಬಂಧಿಸಿದ್ದ ಇಡಿ, 22ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿತ್ತು. ನ್ಯಾಯಾಲಯ ಆರಂಭದಲ್ಲಿ ಮಾರ್ಚ್ 28ವರೆಗೆ ಇಡಿ ಕಸ್ಟಡಿಗೆ ನೀಡಿತ್ತು. ಮಾರ್ಚ್ 28ರಂದು ಕಸ್ಟಡಿ ಅವಧಿ ಮುಗಿದ ಹಿನ್ನೆಲೆ ಇಡಿ ಕೇಜ್ರಿವಾಲ್ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular