HomeLatest NewsBREAKING: ಇಂದು ರಾತ್ರಿ ಬೆಂಗಳೂರಿಗೆ ಕೆ.ಸಿ. ವೇಣುಗೋಪಾಲ್: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ನಾಯಕರ ಚರ್ಚೆ...

BREAKING: ಇಂದು ರಾತ್ರಿ ಬೆಂಗಳೂರಿಗೆ ಕೆ.ಸಿ. ವೇಣುಗೋಪಾಲ್: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ನಾಯಕರ ಚರ್ಚೆ ಸಾಧ್ಯತೆ

ಬೆಂಗಳೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಇಂದು ಬೆಂಗಳೂರಿಗೆ ಆಗಮಿಸಲಿದ್ದು, ಕೆಲವು ನಾಯಕರು ಅವರನ್ನು ಭೇಟಿಯಾಗಿ ರಾಜ್ಯದಲ್ಲಿನ ಬೆಳವಣಿಗೆ ಕುರಿತಾಗಿ ಚರ್ಚೆ ನಡೆಸುವ ಸಾಧ್ಯತೆ ಇದೆ.

ಇಂದು ರಾತ್ರಿ 11 ಗಂಟೆಗೆ ಕೆ.ಸಿ. ವೇಣುಗೋಪಾಲ್ ಬೆಂಗಳೂರಿಗೆ ಬರಲಿದ್ದಾರೆ. ಏರ್ಪೋರ್ಟ್ ಬಳಿಯ ತಾಜ್ ಹೋಟೆಲ್ ನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಈ ವೇಳೆ ಕೆಲವು ರಾಜ್ಯ ನಾಯಕರು ಭೇಟಿಯಾಗುವ ಸಾಧ್ಯತೆ ಇದೆ. ಭೇಟಿಯಾಗಿ ರಾಜ್ಯದಲ್ಲಿ ಅಧಿಕಾರ ಹಂಚಿಕೆ, ನಾಯಕತ್ವ ಬದಲಾವಣೆ ಕುರಿತಾಗಿ ಚರ್ಚೆ ನಡೆಸುವ ಸಾಧ್ಯತೆ ಇದೆ.

ನಾಳೆ ಬೆಳಗ್ಗೆ ವೇಣುಗೋಪಾಲ್ ಕೇರಳದ ವಯನಾಡಿಗೆ ತೆರಳಲಿದ್ದಾರೆ. ಇಂದು ಅವರು ಬೆಂಗಳೂರಿಗೆ ಆಗಮಿಸಿದ ಸಂದರ್ಭದಲ್ಲಿ ರಾಜ್ಯದ ಕೆಲವು ನಾಯಕರು ಭೇಟಿಯಾಗಲಿದ್ದಾರೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular