BREAKING : ‘ಚಕ್ರವರ್ತಿ ಸೂಲಿಬೆಲೆ’ಗೆ ಕಲಬುರಗಿ ಜಿಲ್ಲೆ ಪ್ರವೇಶಕ್ಕೆ ವಿಧಿಸಿದ್ದ ನಿರ್ಬಂಧ ತೆರವು

ಕಲಬುರಗಿ : ಚಕ್ರವರ್ತಿ ಸೂಲಿಬೆಲೆಗೆ ಕಲಬುರಗಿ ಜಿಲ್ಲೆ ಪ್ರವೇಶಕ್ಕೆ ವಿಧಿಸಿದ್ದ ನಿರ್ಬಂಧ ತೆರವುಗೊಳಿಸಿ ಕಲಬುರಗಿ ಹೈಕೋರ್ಟ್ ಆದೇಶ ಹೊರಡಿಸಿದೆ.

ಸೂಲಿಬೆಲೆ ಚಕ್ರವರ್ತಿ ಅವರಿಗೆ ಕಲಬುರಗಿ ಜಿಲ್ಲೆ  ಪ್ರವೇಶ ನಿಬಂಧ ವಿಧಿಸಿ ಉಪ ವಿಭಾಗಾಧಿಕಾರಿ ರೂಪೇಂದ್ರ ಕೌರ್ ಆದೇಶ ಹೊರಡಿಸಿದ್ದರು. ನಂತರ ಸೂಲಿಬೆಲೆ ಇದನ್ನು ಪ್ರಶ್ನಿಸಿ ಕಲಬುರಗಿ ಹೈಕೋರ್ಟ್ ಮೊರೆ ಹೋಗಿದ್ದರು. ಇದೀಗ ವಿಧಿಸಿದ್ದ ನಿರ್ಬಂಧ ತೆರವುಗೊಳಿಸಿ   ಕಲಬುರಗಿಯ ಹೈಕೋರ್ಟ್ ವಿಭಾಗೀಯ ಪೀಠ  ಆದೇಶ ಹೊರಡಿಸಿದೆ.ಚಕ್ರವರ್ತಿ ಸೂಲಿಬೆಲೆ ಅವರ ಪ್ರವೇಶಕ್ಕೆ  ಜಿಲ್ಲಾಡಳಿತ ಹೇರಿದ್ದ ನಿರ್ಬಂಧವನ್ನು ಕರ್ನಾಟಕ ಹೈಕೋರ್ಟ್‌ನ ಕಲಬುರಗಿ ಪೀಠ ತೆರವುಗೊಳಿಸಿದೆ.

ಚಕ್ರವರ್ತಿ ಸೂಲಿಬೆಲೆ ಪ್ರಚೋದನಾಕಾರಿ ಭಾಷಣದಿಂದ ಶಾಂತಿಗೆ ಧಕ್ಕೆ ಬರುವ ಸಾಧ್ಯತೆ ಎನ್ನುವ ಕಾರಣಕ್ಕೆ ಪ್ರವೇಶ ನಿರ್ಬಂಧ ವಿಧಿಸಲಾಗಿತ್ತು.ಚಿತ್ತಾಪುರದಲ್ಲಿ ನಡೆಯಬೇಕಿದ್ದ ನಮೋ ಬ್ರಿಗೇಡ್ ಕಾರ್ಯಕ್ರಮಕ್ಕೆ ತೆರಳದಂತೆ ಚಿತ್ತಾಪುರ ತಹಸೀಲ್ದಾರ್ ಹಾಗೂ ಪೊಲೀಸರು ಅನುಮತಿ ನಿರಾಕರಿಸಿದ್ದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read