BREAKING : ರಾಮಮಂದಿರಕ್ಕೆ ಮೊದಲ ಇಟ್ಟಿಗೆ ಇಟ್ಟಿದ್ದ ‘ಕಾಮೇಶ್ವರ ಚೌಪಾಲ್’ ನಿಧನ, ಪ್ರಧಾನಿ ಮೋದಿ ಸಂತಾಪ.!

ಪ್ರಸಿದ್ಧ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಮೊದಲ ಇಟ್ಟಿಗೆ ಇಟ್ಟಿದ್ದ ವಿಶ್ವ ಹಿಂದೂ ಪರಿಷತ್ ನಾಯಕ 68ವರ್ಷ ದ ಕಾಮೇಶ್ವರ್ ಚೌಪಾಲ್ ಶುಕ್ರವಾರ ನಿಧನರಾಗಿದ್ದಾರೆ .

ಮೂತ್ರಕೋಶ ಸಮಸ್ಯೆಯಿಂದ ಬಳಲುತ್ತಿದ್ದ ಚೌಪಾಲ್ ಅವರನ್ನು ದೆಹಲಿಯ ಶ್ರೀ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಶುಕ್ರವಾರ ಅವರು ಕೊನೆಯುಸಿರೆಳೆದಿದ್ದಾರೆ.

1989ರಲ್ಲಿ ರಾಮಮಂದಿರ ನಿರ್ಮಾಣದ ಉದ್ದೇಶದಿಂದ ಆರಂಭಿಸಿದ್ದ ಕಾಮಗಾರಿಗೆ ಮೊದಲ ಇಟ್ಟಿಗೆಯನ್ನು ಚೌಪಾಲ್ ಇಟ್ಟಿದ್ದರು. ಇನ್ನು ಚೌಪಾಲ್ ಅಗಲಿಕೆಗೆ ಕಂಬನಿ ಮಿಡಿದಿರುವ ಪ್ರಧಾನಿ ನರೇಂದ್ರ ಮೋದಿ, ‘ಪ್ರಭು ರಾಮನ ಅನನ್ಯ ಭಕ್ತರಾಗಿದ್ದ ಚೌಪಾಲ್ ಅವರು ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ ಅತ್ಯಮೂಲ್ಯ ಕೊಡುಗೆ ನೀಡಿದ್ದಾರೆ ಎಂದು ಟ್ವೀಟ್ ಮಾಡಿ ಸಂತಾಪ ವ್ಯಕ್ತಪಡಿಸಿದ್ದಾರೆ. ಗೃಹಮಂತ್ರಿ ಅಮಿತ್ ಶಾ ಸೇರಿದಂತೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಬಿಜೆಪಿಯ ಹಲವು ಗಣ್ಯರು ಕಾಮೇಶ್ವರ್ ಚೌಪಾಲ್ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read