BREAKING: ಕಂಗನಾ ರಣಾವತ್ ‘ಎಮರ್ಜೆನ್ಸಿ’ಗೆ ಸೆನ್ಸಾರ್ ಮಂಡಳಿ ಅನುಮೋದನೆ, ಶೀಘ್ರದಲ್ಲೇ ಬಿಡುಗಡೆ

ನವದೆಹಲಿ: ಬಾಲಿವುಡ್ ನಟಿ ಹಾಗೂ ಮಂಡಿ ಸಂಸದೆ ಕಂಗನಾ ರಣಾವತ್ ಅಭಿನಯದ ‘ಎಮರ್ಜೆನ್ಸಿ’ ಚಿತ್ರಕ್ಕೆ ಸೆನ್ಸಾರ್ ಮಂಡಳಿಯ ಒಪ್ಪಿಗೆ ಸಿಕ್ಕಿದೆ.

‘ಎಮರ್ಜೆನ್ಸಿ’ ನಟಿ ಕಂಗನಾ ಅವರು, ತಮ್ಮ ಅಭಿಮಾನಿಗಳೊಂದಿಗೆ ಮಾಹಿತಿ ಹಂಚಿಕೊಂಡಿದ್ದು, “ನಮ್ಮ ‘ಎಮರ್ಜೆನ್ಸಿ’ ಚಿತ್ರಕ್ಕೆ ಸೆನ್ಸಾರ್ ಪ್ರಮಾಣಪತ್ರವನ್ನು ನಾವು ಸ್ವೀಕರಿಸಿದ್ದೇವೆ ಎಂದು ಘೋಷಿಸಲು ನಮಗೆ ಸಂತೋಷವಾಗಿದೆ, ನಾವು ಶೀಘ್ರದಲ್ಲೇ ಬಿಡುಗಡೆಯ ದಿನಾಂಕವನ್ನು ಘೋಷಿಸುತ್ತೇವೆ. ನಿಮ್ಮ ತಾಳ್ಮೆ ಮತ್ತು ಬೆಂಬಲಕ್ಕೆ ಧನ್ಯವಾದಗಳು” ಎಂದು ತಿಳಿಸಿದ್ದಾರೆ.

ಸೆನ್ಸಾರ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್‌ನಿಂದ ಚಿತ್ರಕ್ಕೆ ಅನುಮತಿ ಸಿಗದ ಕಾರಣ ಕಂಗನಾ ಅವರ ‘ಎಮರ್ಜೆನ್ಸಿ’ ಚಿತ್ರಕ್ಕೆ ಪ್ರಮಾಣಪತ್ರ ಪಡೆಯಲು ನಿರ್ಮಾಪಕರು ಬಾಂಬೆ ಹೈಕೋರ್ಟ್‌ನ ಬಾಗಿಲು ತಟ್ಟಿದ್ದರು. ಚಿತ್ರದಲ್ಲಿ ಮೂರು ದೃಶ್ಯಗಳಿಗೆ ಕತ್ತರಿ ಹಾಕುವಂತೆ ಸೂಚಿಸಲಾಗಿತ್ತು. CBFC ಸೆನ್ಸಾರ್ ಮಂಡಳಿಯ ಸೂಚನೆ ನಂತರವೂ ಕಂಗನಾ ಮತ್ತು ನಿರ್ಮಾಪಕರು ಆ ದೃಶ್ಯಗಳನ್ನು ಕತ್ತರಿಸಲು ಆಸಕ್ತಿ ತೋರಿಸಲಿಲ್ಲ. ಕೊನೆಗೆ ದೃಶ್ಯಗಳನ್ನು ಸೆನ್ಸಾರ್ ಮಾಡಲು ಒಪ್ಪಿಕೊಂಡ ನಂತರ, ಬಾಂಬೆ ಹೈಕೋರ್ಟ್ ಪ್ರಕರಣವನ್ನು ಮುಕ್ತಾಯಗೊಳಿಸಿದೆ.

ಗುರುವಾರ, ತುರ್ತು ಪರಿಸ್ಥಿತಿಯ ನಿರ್ದೇಶಕಿ ಕಂಗನಾ ರಣಾವತ್ ತಮ್ಮ ಚಿತ್ರವು ಈಗ ಸೆನ್ಸಾರ್ ಮಂಡಳಿಯಿಂದ ಪ್ರಮಾಣೀಕರಿಸಲ್ಪಟ್ಟಿದೆ ಎಂದು ಘೋಷಿಸಿದ್ದು, ಬಿಡುಗಡೆಯ ದಿನಾಂಕವನ್ನು ಶೀಘ್ರದಲ್ಲೇ ಘೋಷಿಸುವ ನಿರೀಕ್ಷೆಯಿದೆ.

ಕಂಗನಾ ರನೌತ್ ಬರೆದು ನಿರ್ದೇಶಿಸಿದ ‘ಎಮರ್ಜೆನ್ಸಿ’ ಚಿತ್ರದಲ್ಲಿ ಅನುಪಮ್ ಖೇರ್, ಮಹಿಮಾ ಚೌಧರಿ, ಮಿಲಿಂದ್ ಸೋಮನ್, ಶ್ರೇಯಸ್ ತಲ್ಪಾಡೆ, ವಿಶಾಕ್ ನಾಯರ್ ಮತ್ತು ದಿವಂಗತ ಸತೀಶ್ ಕೌಶಿಕ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಜೀ ಸ್ಟುಡಿಯೋಸ್ ಮತ್ತು ಮಣಿಕರ್ಣಿಕಾ ಫಿಲ್ಮ್ಸ್ ನಿರ್ಮಿಸಿರುವ ಈ ಚಿತ್ರಕ್ಕೆ ಸಂಚಿತ್ ಬಲ್ಹರಾ ಅವರ ಸಂಗೀತ ಮತ್ತು ರಿತೇಶ್ ಶಾ ಅವರ ಚಿತ್ರಕಥೆ ಮತ್ತು ಸಂಭಾಷಣೆ ಇದೆ. ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಜೀವನದ ಕತೆ ಒಳಗಹೊಂಡಿದೆ.

https://twitter.com/KanganaTeam/status/1846870807978311757

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read