BREAKING : ಕನ್ನಡಿಗರ ಹೋರಾಟಕ್ಕೆ ಮಣಿದ ‘ನಮ್ಮ ಮೆಟ್ರೋ’ : ಕನ್ನಡೇತರರ ನೇಮಕಾತಿ ಅಧಿಸೂಚನೆ ವಾಪಸ್.!

ಬೆಂಗಳೂರು : ಹೋರಾಟಕ್ಕೆ ‘ನಮ್ಮ ಮೆಟ್ರೋ’ ಮಣಿದಿದ್ದು,  ಕನ್ನಡೇತರರ ನೇಮಕಾತಿ ಅಧಿಸೂಚನೆ ವಾಪಸ್ ಪಡೆದಿದೆ.

ಹೌದು. ಈ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿದ್ದಾರೆ.ಮೆಟ್ರೋ ಸಾರಥಿ ನೇಮಕದಲ್ಲಿ ಕನ್ನಡಿಗರಿಗೇ ಆದ್ಯತೆ, ಬೆಂಗಳೂರು ಮೆಟ್ರೋ ಚಾಲಕರ ಹುದ್ದೆಗೆ ‘ಅನುಭವ ಅಗತ್ಯʼಎಂದು ಹೊರಡಿಸಲಾಗಿದ್ದ ಬಿಎಂಆರ್ಸಿಎಲ್ ಅಧಿಸೂಚನೆಯನ್ನು ಹಿಂಪಡೆಯಲು ಹಾಗೂ ಕರ್ನಾಟಕದಲ್ಲಿ ಹುಟ್ಟಿ, ಕನ್ನಡ ಬಲ್ಲ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅನುಕೂಲವಾಗುವಂತೆ ಅರ್ಹತೆಗಳನ್ನು ತಿದ್ದುಪಡಿ ಮಾಡಲು ಬಿಎಂಆರ್ಸಿಎಲ್ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚನೆ ನೀಡಿದ್ದೆ. ಅದರಂತೆ ಅವರು ಈ ನೇಮಕಾತಿ ಅಧಿಸೂಚನೆಯನ್ನು ಹಿಂಪಡೆದಿದ್ದಾರೆ. ಪರಿಷ್ಕೃತ ಅಧಿಸೂಚನೆಯನ್ನು ಶೀಘ್ರವೇ ಪ್ರಕಟಿಸಲಾಗುತ್ತದೆ. ನಾಡು-ನುಡಿ, ಜಲದ ವಿಷಯದಲ್ಲಿ ಯಾವುದೇ ರಾಜಿ ಇಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read