HomeLatest NewsBREAKING: 30ಕ್ಕೂ ಹೆಚ್ಚು ದೇಶಗಳು, 7 ಭಾಷೆಗಳಲ್ಲಿ ‘ಕಾಂತಾರ ಚಾಪ್ಟರ್ 1’ ಭರ್ಜರಿ ಓಪನಿಂಗ್: ಪ್ರೇಕ್ಷಕರಿಂದ...

BREAKING: 30ಕ್ಕೂ ಹೆಚ್ಚು ದೇಶಗಳು, 7 ಭಾಷೆಗಳಲ್ಲಿ ‘ಕಾಂತಾರ ಚಾಪ್ಟರ್ 1’ ಭರ್ಜರಿ ಓಪನಿಂಗ್: ಪ್ರೇಕ್ಷಕರಿಂದ ಭಾರೀ ಮೆಚ್ಚುಗೆ

ಬೆಂಗಳೂರು: ಹೊಂಬಾಳೆ ಫಿಲಮ್ಸ್ ನಿರ್ಮಾಣದ, ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ‘ಕಾಂತಾರ ಚಾಪ್ಟರ್ 1’ ಇಂದು ದೇಶ, ವಿದೇಶಗಳಲ್ಲಿ ಬಿಡುಗಡೆಯಾಗಲಿದೆ.

ಇಂದು ಬೆಳಗ್ಗೆ 6.30 ರಿಂದಲೇ ಬೆಂಗಳೂರಿನ ಗಾಂಧಿನಗರದ ಮೂರು ಥಿಯೇಟರ್ ಗಳಲ್ಲಿ ಪ್ರದರ್ಶನ ಆರಂಭವಾಗಿದೆ. ನಿನ್ನೆ ಪ್ರೀಮಿಯರ್ ಶೋ ಕಣ್ತುಂಬಿಕೊಂಡ ಪ್ರೇಕ್ಷಕರು ‘ಕಾಂತಾರ ಚಾಪ್ಟರ್ 1’ ಅದ್ಭುತ ಚಿತ್ರವೆಂದು ಬಣ್ಣಿಸಿದ್ದಾರೆ.

ಬಹುನಿರೀಕ್ಷಿತ ‘ಕಾಂತಾರ ಚಾಪ್ಟರ್ 1’ ಇಂದು ಕರ್ನಾಟಕದ 350ಕ್ಕೂ ಹೆಚ್ಚು ಥಿಯೇಟರ್ ಗಳಲ್ಲಿ ಬಿಡುಗಡೆಯಾಗಲಿದೆ. ಇಂದು ದೇಶಾದ್ಯಂತ 7 ಸಾವಿರಕ್ಕೂ ಹೆಚ್ಚು ಸ್ಕ್ರೀನ್ ಗಳಲ್ಲಿ ಸಿನಿಮಾ ಬಿಡುಗಡೆಯಾಗಲಿದೆ. 125 ಕೋಟಿ ರೂಪಾಯಿ ಬಜೆಟ್ ನಲ್ಲಿ ‘ಕಾಂತಾರ ಚಾಪ್ಟರ್ 1’ ನಿರ್ಮಾಣ ಮಾಡಲಾಗಿದೆ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೊದಲ ದಿನದ ಪ್ರದರ್ಶನಗಳು ಹೌಸ್ ಫುಲ್ ಆಗಿವೆ. 30ಕ್ಕೂ ಹೆಚ್ಚು ದೇಶಗಳಲ್ಲಿ 7 ಭಾಷೆಗಳಲ್ಲಿ ‘ಕಾಂತಾರ ಚಾಪ್ಟರ್ 1’ ತೆರೆ ಕಾಣಲಿದೆ. ಪ್ರೀಮಿಯರ್ ಶೋ ನೋಡಿದ ಪ್ರೇಕ್ಷಕರು ಭಾರಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಈಗಾಗಲೇ ಒಂದು ವಾರದ ಟಿಕೆಟ್ ಗಳು ಸೋಲ್ಡ್ ಔಟ್ ಆಗಿದ್ದು, ಕರ್ನಾಟಕದಲ್ಲಿ ಮಾತ್ರವಲ್ಲದೇ ಹೊರ ರಾಜ್ಯಗಳಲ್ಲೂ ‘ಕಾಂತಾರ ಚಾಪ್ಟರ್ 1’ ಹವಾ ಸೃಷ್ಟಿಸಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular