HomeKarnatakaBREAKING : ರಾಜ್ಯಾದ್ಯಂತ ಅಖಂಡ 'ಕರ್ನಾಟಕ ಬಂದ್' ಯಶಸ್ವಿಯಾಗಿದೆ : ವಾಟಾಳ್ ನಾಗರಾಜ್ |Karnataka...

BREAKING : ರಾಜ್ಯಾದ್ಯಂತ ಅಖಂಡ ‘ಕರ್ನಾಟಕ ಬಂದ್’ ಯಶಸ್ವಿಯಾಗಿದೆ : ವಾಟಾಳ್ ನಾಗರಾಜ್ |Karnataka Bandh

ಬೆಂಗಳೂರು : ರಾಜ್ಯಾದ್ಯಂತ ಕರ್ನಾಟಕ ಬಂದ್ ಯಶಸ್ವಿಯಾಗಿದೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದ್ದಾರೆ.

ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ‘ಕರ್ನಾಟಕ ಬಂದ್’ ಯಶಸ್ವಿಯಾಗಿದೆ. ಎಲ್ಲಾ ಕಡೆ ಬಸ್ ನಿಲ್ದಾಣ, ರಸ್ತೆಗಳು ಖಾಲಿ ಖಾಲಿ ಆಗಿದೆ. ಎಲ್ಲಾ ಸಂಘಟನೆಗಳು ಬೆಂಬಲ ನೀಡಿದೆ. ಒಟ್ಟಾರೆ ಕರೆ ನೀಡಿದ ಬಂದ್ ಯಶಸ್ವಿಯಾಗಿದೆ ಎಂದಿದ್ದಾರೆ.

ಪೊಲೀಸರು ನಮ್ಮ ಹೋರಾಟವನ್ನು ಹತ್ತಿಕ್ಕುವ ಕೆಲಸ ಮಾಡಿದ್ದಾರೆ. ಸಿಕ್ಕ ಸಿಕ್ಕವರಿಗೆ ನೋಟಿಸ್ ಕೊಟ್ಟಿದ್ದಾರೆ. ಸುಮಾರು 3000 ಹೆಚ್ಚು ಮಂದಿ ಪ್ರತಿಭಟನಾಕಾರರನ್ನು ಬಂಧಿಸಿದ್ದಾರೆ. ನನಗೂ ಒಂದು ನೋಟಿಸ್ ಕೊಟ್ಟಿದ್ದಾರೆ ಎಂದು ವಾಟಾಳ್ ನಾಗರಾಜ್ ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕನ್ನಡಿಗರ ಮೇಲೆ ಹಲ್ಲೆ, ದೌರ್ಜನ್ಯ, ಮರಾಠಿ ಪುಂಡರಿಂದ ಕೆ.ಎಸ್.ಆರ್.ಟಿ.ಸಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ ಖಂಡಿಸಿ ಹಾಗೂ ಮೇಕೆದಾಟು ಸೇರಿದಂತೆ ಹಲವು ನೀರಾವರಿ ಯೋಜನೆ ಜಾರಿಗೆ ಆಗ್ರಹಿಸಿ ಕನ್ನಡ ಪರ ಸಂಘಟನೆ ಹೋರಾಟಗಾರ ವಾಟಾಳ್ ನಾಗರಾಜ್ ಅಖಂಡ ಕರ್ನಾಟಕ ಬಂದ್ ಗೆ ಕರೆ ನೀಡಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular