BREAKING : `ಕರ್ನಾಟಕ ಬಂದ್’ ಎಫೆಕ್ಟ್ : ಬೆಂಗಳೂರಿಗೆ ಆಗಮಿಸಬೇಕಿದ್ದ ವಿಮಾನಗಳು ರದ್ದು

a

ಬೆಂಗಳೂರು : ಕಾವೇರಿ  ನೀರು ತಮಿಳುನಾಡಿಗೆ ಹರಿಸುವುದನ್ನು ವಿರೋಧಿಸಿ ಇಂದು ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆ ನೀಡಿದ್ದು,  ಈ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿಗೆ ಆಗಮಿಸಬೇಕಿದ್ದ ವಿಮಾನಗಳು ರದ್ದಾಗಿವೆ.

ಕರ್ನಾಟಕ ಬಂದ್  ಪರಿಣಾಮ ಬೆಂಗಳೂರಿಗೆ ವಿವಿಧ ರಾಜ್ಯಗಳಿಂದ ಆಗಮಿಸಬೇಕಿದ್ದ 44 ವಿಮಾನಗಳನ್ನು ರದ್ದುಪಡಿಸಲಾಗಿದೆ. ಹಾಗೆಯೇ ಬೆಂಗಳೂರಿನಿಂದ ನಿರ್ಗಮಿಸಬೇಕಿದ್ದ 22 ವಿಮಾನಗಳನ್ನೂ ಕೂಡ ರದ್ದು ಮಾಡಲಾಗಿದ್ದು,ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಪ್ರಯಾಣಿಕರ ಸಂಖ್ಯೆ ಕಡಿಮೆ ಇದೆ.

ಬೆಂಗಳೂರು ಸೇರಿದಂತೆ ರಾಜ್ಯದ ನಾನಾ ಕಡೆ ಕಾವೇರಿ ನೀರಿಗಾಗಿ ಪ್ರತಿಭಟನೆ ತೀವ್ರಗೊಂಡಿದೆ. ತಮಿಳುನಾಡು ಗಡಿಭಾಗದಲ್ಲಿ ಜಯ ಕರ್ನಾಟಕ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ವೇಳೆ ಪೊಲೀಸರು ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರು, ಕೋಲಾರ, ಕೊಪ್ಪಳ, ಚಿಕ್ಕಮಗಳೂರು, ಹುಬ್ಬಳ್ಳಿ, ಮಂಡ್ಯ, ಮೈಸೂರು, ರಾಮನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದು ಬೆಳಗ್ಗೆ 6 ಗಂಟೆಯಿಂದಲೇ ಹೋರಾಟಗಾರರು ಪ್ರತಿಭಟನೆ ನಡೆಸುತ್ತಿದ್ದಾರೆ. ಹಲವಡೆ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read