BREAKING : ನಾಳೆ ‘ಕರ್ನಾಟಕ ಬಂದ್’ : ಶಾಲಾ, ಕಾಲೇಜುಗಳಿಗೆ ರಜೆ ನೀಡೋ ಅಧಿಕಾರ ಜಿಲ್ಲಾಧಿಕಾರಿಗಳಿಗೆ

ಬೆಂಗಳೂರು : ನಾಳೆ ‘ಕರ್ನಾಟಕ ಬಂದ್’ ಗೆ ಕರೆ ನೀಡಿರುವ ಹಿನ್ನೆಲೆ ಶಾಲಾ, ಕಾಲೇಜುಗಳಿಗೆ ರಜೆ ಇದೆಯೋ..? ಇಲ್ವೋ ಎಂಬ ಗೊಂದಲ ವಿದ್ಯಾರ್ಥಿಗಳಲ್ಲಿದೆ.

ರಜೆ ನೀಡುವ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಶಿಕ್ಷಣ ಇಲಾಖೆ ಅಧಿಕಾರ ನೀಡಿದೆ. ಸರ್ಕಾರಿ ಶಾಲಾ-ಕಾಲೇಜುಗಳಿಗೆ ಶಿಕ್ಷಣ ಇಲಾಖೆಯಿಂದ ರಜೆ ಘೋಷಣೆ ಇಲ್ಲ. ಪರಿಸ್ಥಿತಿ ನೋಡಿಕೊಂಡು ಜಿಲ್ಲಾಧಿಕಾರಿಗಳು ರಜೆ ನೀಡಬಹುದು ಎಂದು ಶಿಕ್ಷಣ ಇಲಾಖೆ ಸೂಚಿಸಿದೆ. ಖಾಸಗಿ ಶಾಲೆಗಳ ಒಕ್ಕೂಟ ಕರ್ನಾಟಕ ಬಂದ್ಗೆ ನೈತಿಕ ಬೆಂಬಲ ವ್ಯಕ್ತಪಡಿಸಿದ್ದು, ಶಾಲೆಗಳಿಗೆ ರಜೆ ನೀಡುವ ನಿರ್ಧಾರವನ್ನು ಆಯಾ ಶಾಲಾ ಆಡಳಿತ ಮಂಡಳಿಗೆ ನೀಡಲಾಗಿದೆ. ಪರಿಸ್ಥಿತಿ ನೋಡಿಕೊಂಡು ರಜೆ ಕೊಡಬಹುದು ಎಂದು ಒಕ್ಕೂಟಗಳು ಹೇಳಿದೆ.

ಒಟ್ಟಿನಲ್ಲಿ ನಾಳೆ ಕರ್ನಾಟಕ ಬಂದ್ ಗೆ ವಿವಿಧ ಸಂಘಟನೆಗಳು ಬೆಂಬಲ ನೀಡಿದ್ದು, ಖಾಸಗಿ ಬಸ್ , ಆಟೋ, ಟ್ಯಾಕ್ಸಿ ಸೇರಿದಂತೆ ಯಾವುದೇ ವಾಹನ ಸೇವೆ ಇರೋದಿಲ್ಲ. ಸರ್ಕಾರಿ ಬಸ್ ಗಳು ಸಂಚರಿಸುವ ಬಗ್ಗೆ ಇನ್ನಷ್ಟೇ ಮಾಹಿತಿ ತಿಳಿದು ಬರಬೇಕಿದೆ.

ತಮಿಳುನಾಡಿಗೆ ಕಾವೇರಿ ನೀರು ಹರಿಬಿಡುತ್ತಿರುವ ಸರ್ಕಾರದ ಕ್ರಮ ಖಂಡಿಸಿ ನಾಳೆ ಅಖಂಡ ಕರ್ನಾಟಕ ಬಂದ್ ನಡೆಸಲು ಕನ್ನಡ ಪರ ಸಂಘಟನೆಗಳು ಕರೆ ಕೊಟ್ಟಿವೆ.ಸೆ.29 ರ ಕರ್ನಾಟಕ ಬಂದ್ ಗೆ ಬಹುತೇಕ ಬೆಂಬಲ ಸಿಕ್ಕಿದೆ. ಎಲ್ಲಾ ಸಂಘಟನೆಗಳು ಬೆಂಬಲ ನೀಡಿದೆ. ಸೆ.29 ರಂದು ಬೆಳಗ್ಗೆ 6 ರಿಂದ ಸಂಜೆ 6 ವರೆಗೆ ‘ಕರ್ನಾಟಕ ಬಂದ್’ ಗೆ ಕರೆ ನೀಡಲಾಗಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read