HomeKarnatakaBREAKING : ರಾಜ್ಯದಲ್ಲಿ ಹೊಸದಾಗಿ 9 ತಾಲೂಕುಗಳು ಬರ ಪಟ್ಟಿಗೆ ಸೇರ್ಪಡೆ ; ಒಟ್ಟು ಸಂಖ್ಯೆ...

BREAKING : ರಾಜ್ಯದಲ್ಲಿ ಹೊಸದಾಗಿ 9 ತಾಲೂಕುಗಳು ಬರ ಪಟ್ಟಿಗೆ ಸೇರ್ಪಡೆ ; ಒಟ್ಟು ಸಂಖ್ಯೆ 226ಕ್ಕೆ ಏರಿಕೆ

ಬೆಂಗಳೂರು : ಕರ್ನಾಟಕದಲ್ಲಿ ಬರಪೀಡಿತ ತಾಲೂಕುಗಳ ಸಂಖ್ಯೆ 217ರಿಂದ 226ಕ್ಕೆ ಏರಿಕೆಯಾಗಿದೆ. ರಾಜ್ಯ ಸರ್ಕಾರವು ಹೊಸದಾಗಿ 9 ತಾಲೂಕುಗಳನ್ನು ಮಧ್ಯಮ ಬರಪೀಡಿತ ಪಟ್ಟಿಗೆ ಸೇರ್ಪಡೆ ಮಾಡಿದೆ.

ಬೆಳಗಾವಿ ಜಿಲ್ಲೆಯ ಖಾನಾಪುರ, ಶಿವಮೊಗ್ಗ ಜಿಲ್ಲೆಯ ಹೊಸನಗರ ಮತ್ತು ಸಾಗರ, ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ, ಪುತ್ತೂರು ಮತ್ತು ಮುಲ್ಕಿ, ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ಮತ್ತು ದಾಂಡೇಲಿ ಸೇರಿದಂತೆ ತಾಲೂಕುಗಳನ್ನು ಬರಪೀಡಿತ ಎಂದು ಗುರುತಿಸಲಾಗಿದೆ.ಕರ್ನಾಟಕದಲ್ಲಿ ಬರಪೀಡಿತ ತಾಲೂಕುಗಳ ಸಂಖ್ಯೆ 217ರಿಂದ 226ಕ್ಕೆ ಏರಿಕೆಯಾಗಿದೆ. ಈ ಹಿಂದೆ ರಾಜ್ಯದ 217 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದ್ದ ಸರ್ಕಾರ, ಇದೀಗ ಹೊಸದಾಗಿ 9 ತಾಲೂಕುಗಳನ್ನು ಮಧ್ಯಮ ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರ್ಪಡೆ ಮಾಡಿದೆ.

ಹೊಸದಾಗಿ ಬರಪೀಡಿತ ಪಟ್ಟಿಗೆ ಸೇರ್ಪಡೆಯಾದ ತಾಲೂಕುಗಳ ವಿವರ ಹೀಗಿದೆ:

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

·         ಬೆಳಗಾವಿ ಜಿಲ್ಲೆ: ಖಾನಾಪುರ

·         ಶಿವಮೊಗ್ಗ ಜಿಲ್ಲೆ: ಹೊಸನಗರ, ಸಾಗರ

·         ದಕ್ಷಿಣ ಕನ್ನಡ ಜಿಲ್ಲೆ: ಮೂಡುಬಿದಿರೆ, ಪುತ್ತೂರು, ಮುಲ್ಕಿ

·         ಉತ್ತರ ಕನ್ನಡ ಜಿಲ್ಲೆ: ಜೋಯಿಡಾ, ದಾಂಡೇಲಿ

ಈ ತಾಲೂಕುಗಳನ್ನು ಮಧ್ಯಮ ಬರಪೀಡಿತ ಎಂದು ಗುರುತಿಸಲಾಗಿದೆ. ಇದರಿಂದ ರಾಜ್ಯದಲ್ಲಿ ಬರಪೀಡಿತ ತಾಲೂಕುಗಳ ಒಟ್ಟು ಸಂಖ್ಯೆ 226ಕ್ಕೆ ತಲುಪಿದೆ.

*ಡೆಂಗ್ಯೂ  ಮತ್ತು ಚಿಕೂನ್‌ಗುನ್ಯ ನಿಯಂತ್ರಣಕ್ಕೆ ಸಾರ್ವಜನಿಕರಲ್ಲಿ ಜಾಗೃತಿ

 ಸೋಂಕು ಹೊಂದಿದ ಈಡೀಸ್ ಈಜಿಪ್ಟಿ ಸೊಳ್ಳೆಗಳ ಕಡಿತದಿಂದ ಹರಡುವ ಡೆಂಗೀ ಹಾಗೂ ಚಿಕೂನ್‌ಗುನ್ಯ ಜ್ವರಗಳ ನಿಯಂತ್ರಣಕ್ಕೆ ಸಾರ್ವಜನಿಕರು ಕೈಜೋಡಿಸುವಂತೆ ಆರೋಗ್ಯ ಇಲಾಖೆ ಮನವಿ ಮಾಡಿದೆ.

 ನಿಂತ ಸ್ವಚ್ಛ ನೀರಿನಲ್ಲಿ ಉತ್ಪತ್ತಿಯಾಗುವ ಈ ಸೊಳ್ಳೆಗಳು ಸಾಮಾನ್ಯವಾಗಿ ಹಗಲು ವೇಳೆಯಲ್ಲಿ ಕಚ್ಚುತ್ತವೆ. ಈ ಸೊಳ್ಳೆಗಳು ಮೊಟ್ಟೆ, ಲಾರ್ವಾ ಮತ್ತು ಪ್ಯೂಪಾ ಹಂತಗಳನ್ನು ನೀರಿನಲ್ಲಿ ಪೂರೈಸಿ, 8 ರಿಂದ 10 ದಿನಗಳಲ್ಲಿ ಪೂರ್ಣ ಪ್ರಮಾಣದ ಸೊಳ್ಳೆಯಾಗಿ ಬೆಳೆಯುತ್ತವೆ.

 *ರೋಗ ಲಕ್ಷಣಗಳು

 ಹಠಾತ್ತನೆ ಕಾಣಿಸಿಕೊಳ್ಳುವ ತೀವ್ರ ಜ್ವರ, ವಿಪರೀತ ತಲೆನೋವು ಹಾಗೂ ಕಣ್ಣುಗಳ ಹಿಂಭಾಗದಲ್ಲಿ ನೋವು, ಮೈ-ಕೈ ನೋವು ಮತ್ತು ಕೀಲುಗಳಲ್ಲಿ ನೋವು, ವಾಕರಿಕೆ ಹಾಗೂ ವಾಂತಿ.

 ಸೊಳ್ಳೆ ಉತ್ಪತ್ತಿ ತಾಣಗಳು:

ಸಿಮೆಂಟ್ ತೊಟ್ಟಿಗಳು, ಪ್ಲಾಸ್ಟಿಕ್ ಡ್ರಂಗಳು, ಬ್ಯಾರಲ್‌ಗಳು, ಬಕೆಟ್‌ಗಳು, ಏರ್‌ಕೂಲರ್‌ಗಳು, ಹೂವಿನ ಕುಂಡಗಳ ತಟ್ಟೆಗಳು, ತೆಂಗಿನ ಚಿಪ್ಪುಗಳು ಹಾಗೂ ಹಳೆಯ ಒಡೆದ ಟೈರ್‌ಗಳಲ್ಲಿ ಮಳೆ ನೀರು ಅಥವಾ ಸ್ವಚ್ಛ ನೀರು ನಿಲ್ಲುವುದರಿಂದ ಸೊಳ್ಳೆಗಳು ಹೆಚ್ಚಿನ ಸಂಖ್ಯೆಯಲ್ಲಿ ಸಂತಾನೋತ್ಪತ್ತಿ ಮಾಡುತ್ತವೆ.

 ಮುನ್ನೆಚ್ಚರಿಕೆ:

ನೀರಿನ ಸಂಗ್ರಹಣಾ ತೊಟ್ಟಿಗಳು, ಏರ್‌ಕೂಲರ್‌ಗಳು ಮತ್ತು ಬ್ಯಾರಲ್‌ಗಳನ್ನು ವಾರಕ್ಕೊಮ್ಮೆ ಖಾಲಿ ಮಾಡಿ, ಚೆನ್ನಾಗಿ ಉಜ್ಜಿ ಸ್ವಚ್ಛಗೊಳಿಸಿ, ಮುಚ್ಚಳದಿಂದ ಮುಚ್ಚಬೇಕು. ಮನೆಯ ಸುತ್ತಮುತ್ತ ಇರುವ ಒಡೆದ ಬಾಟಲಿಗಳು, ಟೈರ್‌ಗಳು ಹಾಗೂ ತೆಂಗಿನ ಚಿಪ್ಪುಗಳನ್ನು ಸೂಕ್ತವಾಗಿ ವಿಲೇವಾರಿ ಮಾಡಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಸೊಳ್ಳೆ ಪರದೆಗಳು, ಸೊಳ್ಳೆ ನಿರೋಧಕಗಳನ್ನು ಬಳಸಿ ಹಗಲು ಹೊತ್ತಿನಲ್ಲಿ ಸೊಳ್ಳೆ ಕಡಿತದಿಂದ ರಕ್ಷಣೆ ಪಡೆಯಬೇಕು.

 ರೋಗದ ಲಕ್ಷಣಗಳು ಕಂಡುಬಂದಲ್ಲಿ ಸಾರ್ವಜನಿಕರು ಯಾವುದೇ ನಿರ್ಲಕ್ಷ್ಯ ವಹಿಸದೆ ತಕ್ಷಣವೇ ಸಮೀಪದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಉಚಿತ ಪರೀಕ್ಷೆ ಮತ್ತು ಸೂಕ್ತ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ಪ್ರಕಟಣೆ ತಿಳಿಸಿದೆ.

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular