BREAKING : ಇಂದು ಸಂಜೆ ನಿಗದಿಯಾಗಿದ್ದ ರಾಜ್ಯ ಸರ್ಕಾರದ ‘ಸಚಿವ ಸಂಪುಟ ಸಭೆ’ ನಾಳೆಗೆ ಮುಂದೂಡಿಕೆ |Karnataka Cabinet Meeting

ಬೆಂಗಳೂರು : ಇಂದು ಸಂಜೆ 7 ಗಂಟೆಗೆ ನಿಗದಿಯಾಗಿದ್ದ ರಾಜ್ಯ ಸಚಿವ ಸಂಪುಟ ಸಭೆ ನಾಳೆಗೆ ಮುಂದೂಡಿಕೆಯಾಗಿದೆ.

ನಾಳೆ ಸಂಜೆ 6 ಗಂಟೆಗೆ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಯಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಹಾಗೂ,  ಗ್ಯಾರಂಟಿ ಅನುಷ್ಠಾನ ಸಮಿತಿಗಳಿಂದ ಶಾಸಕರ ಹಕ್ಕುಗಳಿಗೆ ಚ್ಯುತಿ ಬಾರದಂತೆ ರಕ್ಷಣೆ ಒದಗಿಸಲಾಗುವುದು. ಅಧಿವೇಶನ ಮುಗಿದ ಬಳಿಕ ವಿಪಕ್ಷ ಶಾಸಕರ ಜೊತೆ ಚರ್ಚಿಸಿ ಒಮ್ಮತದ ನಿರ್ಣಯಕ್ಕೆ ಬರಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಯುಪಿಎಸ್ಸಿ ಮಾದರಿಯಲ್ಲಿ ಕೆಪಿಎಸ್ಸಿಯಲ್ಲಿ ಸುಧಾರಣಾ ಕ್ರಮಗಳನ್ನು ಜಾರಿ ಮಾಡಿ, ಪಾರದರ್ಶಕ ಮತ್ತು ನ್ಯಾಯಸಮ್ಮತ ನೇಮಕಾತಿಗೆ ಆದ್ಯತೆ ನೀಡಲಾಗುವುದು. ನ್ಯಾಯಾಲಯವು ಸೂಚನೆ ಕೊಟ್ಟರೆ ಮರು ಪರೀಕ್ಷೆ ಮಾಡುವಂತೆ ಸಲಹೆ ನೀಡುತ್ತೇನೆ. ಮೊದಲು ಕನ್ನಡದಲ್ಲಿ ಪ್ರಶ್ನೆಪತ್ರಿಕೆ ತಯಾರಿಸಿ, ಬಳಿಕ ಅದನ್ನು ಇಂಗ್ಲೀಷ್ ಭಾಷೆಗೆ ಭಾಷಾಂತರಿಸಲು ಕ್ರಮ ವಹಿಸಲಾಗುವುದು. ಕೆಪಿಎಸ್ಸಿ ಯಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ವಿಧಾನಸಭೆಯಲ್ಲಿ ನಡೆದ ಚರ್ಚೆಗೆ ನನ್ನ ಉತ್ತರ ಎಂದು ಅವರು ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read