BREAKING: ಕರ್ನಾಟಕದಲ್ಲಿ ರೈತರಿಗೆ ಬೇಕಿರುವಷ್ಟು ರಸಗೊಬ್ಬರ ಇದೆ: ಲೋಕಸಭೆಯಲ್ಲಿ ಸರ್ಕಾರ ಮಾಹಿತಿ

ನವದೆಹಲಿ: ಕರ್ನಾಟಕದಲ್ಲಿ ರೈತರಿಗೆ ಬೇಕಿರುವಷ್ಟು ರಸಗೊಬ್ಬರ ದಾಸ್ತಾನು ಇದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಲೋಕಸಭೆಯಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ ರಾಜ್ಯದಲ್ಲಿ ಸಮಸ್ಯೆ ವಿಚಾರವನ್ನು ಪ್ರಸ್ತಾಪಿಸಲಾಗಿದ್ದು, ಕರ್ನಾಟಕದಲ್ಲಿ ರೈತರಿಗೆ ಬೇಕಿರುವಷ್ಟು ರಸಗೊಬ್ಬರ ದಾಸ್ತಾನು ಇದೆ ಎಂದು ಲೋಕಸಭೆಯಲ್ಲಿ ರಾಸಾಯನಿಕ ಮತ್ತು ರಸಗೊಬ್ಬರ ಖಾತೆಯ ರಾಜ್ಯ ಸಚಿವರಾದ ಅನುಪ್ರಿಯಾ ಪಟೇಲ್ ಉತ್ತರ ನೀಡಿದ್ದಾರೆ.

ಸಂಸದರಾದ ಗೋವಿಂದ ಕಾರಜೋಳ ಮತ್ತು ಡಾ. ಪ್ರಭಾ ಮಲ್ಲಿಕಾರ್ಜುನ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಕಳಪೆ ರಸಗೊಬ್ಬರ ವಿತರಣೆಗೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.

ನಕಲಿ ರಸಗೊಬ್ಬರ ಮಾರಾಟ ವಿಚಾರದ ಗಮನಕ್ಕೆ ಬಂದಿದೆ. ರೈತರಿಗೆ ಕಳಪೆ ರಸಗೊಬ್ಬರ ಮಾರಾಟ ಸಂಬಂಧ ಐದು ಪ್ರಕರಣ ದಾಖಲಿಸಲಾಗಿದೆ. ಬಾಗಲಕೋಟೆ ಜಿಲ್ಲೆಯಲ್ಲಿ 2, ಹಾವೇರಿ ಜಿಲ್ಲೆಯಲ್ಲಿ 2 ಕೇಸು ದಾಖಲಿಸಲಾಗಿದೆ. ಅದೇ ರೀತಿ ಮಳೆ ಆರಂಭಕ್ಕೂ ಮುನ್ನ ರಸಗೊಬ್ಬರ ಹಂಚಿಕೆ ಮಾಡುತ್ತದೆ. ಕರ್ನಾಟಕದಲ್ಲಿ ರಸಗೊಬ್ಬರದ ದಾಸ್ತಾನು ಇದೆ ಎಂದು ಲೋಕಸಭೆಯಲ್ಲಿ ಸಚಿವೆ ಅನುಪ್ರಿಯಾ ಪಟೇಲ್ ಉತ್ತರ ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read