ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಇಂದು ದ್ವಿತೀಯ ಪಿಯುಸಿ (Exam-1) ಫಲಿತಾಂಶ ಪ್ರಕಟಿಸಿದೆ. ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್ karresults.nic.in ಅಥವಾ ಕರ್ನಾಟಕ ಒನ್ ಮೊಬೈಲ್ ಆಪ್‌ನಲ್ಲಿ ವೀಕ್ಷಿಸಬಹುದು.ವಿದ್ಯಾರ್ಥಿಗಳ ರಿಜಿಸ್ಟರ್ಡ್ ಮೊಬೈಲ್ ಸಂಖ್ಯೆಗೆ SMS ಅಥವಾ WhatsApp ಮೂಲಕ ಫಲಿತಾಂಶ ಬರಲಿದೆ.
ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರು ಇಂದು ಸಂಜೆ 6ಕ್ಕೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಲಿದ್ದಾರೆ. ಇದಕ್ಕೂ ಮೊದಲು ಆನ್ಲೈನ್ನಲ್ಲಿ https://karresults.nic.in ವೆಬ್‌ಸೈಟ್ ಮೂಲಕ ಫಲಿತಾಂಶವನ್ನು ಪರಿಶೀಲನೆ ಮಾಡಬಹುದು.
ಡಿಜಿಟಲ್ ಅಂಕಪಟ್ಟಿ : ಈ ಬಾರಿ ಮೊದಲ ಬಾರಿಗೆ ಫಲಿತಾಂಶ ಪ್ರಕಟವಾದ ತಕ್ಷಣವೇ ‘ಡಿಜಿಲಾಕರ್’ (DigiLocker) ಮೂಲಕ ಅಧಿಕೃತ ಅಂಕಪಟ್ಟಿಯನ್ನು ಡೌನ್‌ಲೋಡ್ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.
ಫಲಿತಾಂಶವನ್ನು https://karresults.nic.in ಲಿಂಕ್ ಮೂಲಕ ಹಾಗೂ KarnatakaOne Mobile App ಮೂಲಕವೂ ಪಡೆಯಬಹುದಾಗಿದೆ. ಅಲ್ಲದೆ, ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್ ಸಂಖ್ಯೆಗೆ ವಾಟ್ಸಾಪ್/ಎಸ್‌ಎಂಎಸ್ (SMS) ಮೂಲಕವೂ ಫಲಿತಾಂಶದ ಮಾಹಿತಿಯನ್ನು ಮಂಡಳಿಯಿಂದ ರವಾನಿಸಲಾಗುವುದು.
ಈ ವರ್ಷ ಪ್ರಥಮ ಬಾರಿಗೆ ವಿಶೇಷವಾಗಿ, ವಿದ್ಯಾರ್ಥಿಗಳ ಫಲಿತಾಂಶದ ಅಂಕಪಟ್ಟಿಯನ್ನು (Marks Card) ಡಿಜಿಲಾಕರ್ (DigiLocker) ಮೂಲಕ ದಿನಾಂಕ: 09-04-2026 ರಂದು ಮಧ್ಯಾಹ್ನ 3.00 ಗಂಟೆಗೆ ಲಭ್ಯಗೊಳಿಸಲಾಗುವುದು. https://www.digilocker.gov.in ಅನ್ನು ಬಳಸಿ ಅಂಕಪಟ್ಟಿಯನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.ಅಂಕಪಟ್ಟಿಯನ್ನು ಡಿಜಿಲಾಕರ್‌ನಿಂದ ಡೌನ್‌ಲೋಡ್ ಮಾಡಿಕೊಳ್ಳುವ ಪ್ರಕ್ರಿಯೆಯನ್ನು ಈ Video link https://tinyurl.com/mw84wmh9 ಅನ್ನು ಬಳಸಿ ತಿಳಿದುಕೊಳ್ಳಬಹುದು.
ಈ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆ-1 ಫೆಬ್ರವರಿ 28ರಿಂದ ಮಾರ್ಚ್ 12ರವರೆಗೆ ರಾಜ್ಯಾದ್ಯಂತ ಒಟ್ಟು 1217 ಕೇಂದ್ರಗಳಲ್ಲಿ ನಡೆದಿತ್ತು., 5174 ಕಾಲೇಜುಗಳ ಒಟ್ಟು 7.10 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೊಂದಣಿ ಮಾಡಿಕೊಂಡಿದ್ದರು. ಈ ಪೈಕಿ ವಿಜ್ಞಾನ ವಿಷಯದಲ್ಲಿ 2.92 ಲಕ್ಷ, ವಾಣಿಜ್ಯ ವಿಭಾಗದಲ್ಲಿ 2.11 ಲಕ್ಷ ಹಾಗೂ ಕಲಾ ವಿಭಾಗದಲ್ಲಿ 1.42 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.
ವೆಬ್‌ಸೈಟ್ : ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಈ ಕೆಳಗಿನ ಅಧಿಕೃತ ವೆಬ್‌ಸೈಟ್‌ಗಳಲ್ಲಿ ನೋಡಬಹುದು:
ಫಲಿತಾಂಶ ನೋಡುವುದು ಹೇಗೆ?
- ಮೇಲೆ ತಿಳಿಸಿದ ಯಾವುದಾದರೂ ಒಂದು ವೆಬ್‌ಸೈಟ್‌ಗೆ ಭೇಟಿ ನೀಡಿ.
- ‘2nd PUC Exam-1 Result 2026’ ಎಂಬ ಲಿಂಕ್ ಮೇಲೆ ಕ್ಲಿಕ್ ಮಾಡಿ.
- ನಿಮ್ಮ ನೋಂದಣಿ ಸಂಖ್ಯೆ (Registration Number) ನಮೂದಿಸಿ.
- ನಿಮ್ಮ ವಿಷಯದ ಸ್ಟ್ರೀಮ್ (Arts/Commerce/Science) ಆಯ್ಕೆ ಮಾಡಿ.
- Submit ಬಟನ್ ಒತ್ತಿದರೆ ನಿಮ್ಮ ಅಂಕಪಟ್ಟಿ ಪರದೆಯ ಮೇಲೆ ಕಾಣಿಸುತ್ತದೆ.

