BREAKING: ಪರಪ್ಪನ ಅಗ್ರಹಾರ ಜೈಲಿನಿಂದ ʻಕರವೇʼ ಕಾರ್ಯರ್ತರ ಬಿಡುಗಡೆ

ಬೆಂಗಳೂರು :  ನಾಮಫಲಕಗಳ್ಲಲಿ ಕನ್ನಡ ಕಡ್ಡಾಯ ಅಳವಡಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ನಾಲ್ವರು ಕರವೇ ಕಾರ್ಯಕರ್ತರನ್ನು ಬಿಡುಗಡೆ ಮಾಡಲಾಗಿದೆ.

ಪರಪ್ಪನ ಅಗ್ರಹಾರ ಜೈಲಿನಿಂದ ಇಂದು ನಾಲ್ವರು ಕರವೇ ಕಾರ್ಯಕರ್ತರನ್ನು ಬಿಡುಗಡೆ ಮಾಡಲಾಗಿದೆ. ಬೆಂಗಳೂರು ನಗರದ ಯುವ ಘಟಕದ ಕಾರ್ತಿಕ್‌ ಗೌಡ, ಕಾರ್ಯಕರ್ತರಾದ ಶರತ್‌, ಲೋಕೇಶ್‌ ಗೌಡ, ಹೇಮಂತ್‌ ಎಂಬುವರನ್ನು ಬಿಡುಗಡೆ ಮಾಡಲಾಗಿದೆ.

ನಾಮಫಲಕಗಳಲ್ಲಿ ಕನ್ನಡ ಕಡ್ಡಾಯಕ್ಕಾಗಿ ಒತ್ತಾಯಿಸಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಬಳಿಕ ಪೊಲೀಸರು ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಜೊತೆಗೆ ಇವರನ್ನು ಬಂಧಿಸಿದ್ದರು. ಕಬ್ಬನ್‌ ಪಾರ್ಕ್‌ ಹಾಗೂ ಕಾಟನ್‌ ಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read