ಹುಬ್ಬಳ್ಳಿ : ಹೃದಯಾಘಾತದಿಂದ ಕಾಯಕಯೋಗಿ ಶಿವಲಿಂಗೇಶ್ವೀರ ಶ್ರೀ ಲಿಂಗೈಕ್ಯರಾಗಿದ್ದಾರೆ.
ತಾಲೂಕಿನ ಮಂಟೂರು ಅಡವಿ ಸಿದ್ದೇಶ್ವರ ಮಠ ಹಾಗೂ ಶಿವಮೊಗ್ಗ ಜಿಲ್ಲೆ ಬಳ್ಳಿಗಾವಿ ಶ್ರೀ ಅಲ್ಲಮಪ್ರಭು ಅನುಭಾವ ಪೀಠ ವಿರಕ್ತಮಠದ ಪೀಠಾಧಿಪತಿಗಳಾಗಿದ್ದ ಶ್ರೀ ಮನಿಪು ಶಿವಲಿಂಗೇಶ್ವರ ಸ್ವಾಮೀಜಿ (82) ಬೆಳಿಗ್ಗೆ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಲಿಂಗೈಕ್ಯರಾಗಿದ್ದಾರೆ ಎಂದು ತಿಳಿದು ಬಂದಿದೆ.
ಹೃದಯಾಘಾತದ ಹಿನ್ನೆಲೆ ಸ್ವಾಮೀಜಿಯವರನ್ನು ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ 11 ದಿನಗಳಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶ್ರೀಗಳು ಇಂದು ಬೆಳಿಗ್ಗೆ 1 ಗಂಟೆಗೆ ಲಿಂಗೈಕ್ಯರಾಗಿದ್ದಾರೆ.