ತುಮಕೂರು: ನೀರಿನ ಸಂಪ್ ನಲ್ಲಿ ತಾಯಿ, ಇಬ್ಬರು ಮಕ್ಕಳ ಶವ ಪತ್ತೆಯಾಗಿವೆ. ತುಮಕೂರು ತಾಲೂಕಿನ ಸಿಂಗನಹಳ್ಳಿ ಕಾಲೋನಿಯಲ್ಲಿ ಘಟನೆ ನಡೆದಿದೆ.
ನೀರಿನ ಸಂಪ್ ನಲ್ಲಿ 26 ವರ್ಷದ ವಿಜಯಲಕ್ಷ್ಮಿ, ಮಕ್ಕಳಾದ ಚೇತನ್(5), ಚೈತನ್ಯ(5) ಅವರ ಮೃತದೇಹ ಪತ್ತೆಯಾಗಿವೆ. ಫ್ಯಾಕ್ಟರಿಯೊಂದರಲ್ಲಿ ವಿಜಯಲಕ್ಷ್ಮಿ ಅವರ ಪ್ರತಿ ಕೆಲಸ ಮಾಡುತ್ತಿದ್ದಾರೆ. ಕೆಲಸ ಮುಗಿಸಿ ಪತಿ ಮನೆಗೆ ಬಂದಾಗ ಪತ್ನಿ, ಮಕ್ಕಳು ಇರಲಿಲ್ಲ.
ಗಾಬರಿಯಾದ ಅವರು ಪತ್ನಿ ಹಾಗೂ ಮಕ್ಕಳಿಗಾಗಿ ಹುಡುಕಾಟ ನಡೆಸಿದ್ದಾರೆ. ಮನೆಯ ಹೊರಗಡೆಯ ಸಂಪ್ ನಲ್ಲಿ ಶವಗಳು ಪತ್ತೆಯಾಗಿವೆ. ನೀರಿನ ಸಂಪ್ ಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ವಿಜಯಲಕ್ಷ್ಮಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

