BREAKING: ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ: ಬೈಕ್ ಸವಾರ ಸಾವು: ಪತ್ನಿ, ಮಕ್ಕಳಿಗೆ ಗಂಭೀರ ಗಾಯ

ಬೆಂಗಳೂರು: ಬೆಂಗಳೂರಿನಲ್ಲಿ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟಿದ್ದಾರೆ. ಬೆಳಗ್ಗೆ 11 ಗಂಟೆ ಸುಮಾರಿಗೆ ಬಾಣಸವಾಡಿ ಫ್ಲೈಓವ್ ಸಮೀಪ ಘಟನೆ ನಡೆದಿದೆ.

ಮಹಮ್ಮದ್ ಜಂಶೀರ್(40) ಮೃತಪಟ್ಟ ಸವಾರ ಎಂದು ಹೇಳಲಾಗಿದೆ. ಬಿಎಂಟಿಸಿ ಬಸ್ ಡಿಕ್ಕಿಯಾಗಿ ಜಂಶೀರ್ ಮೃತಪಟ್ಟಿದ್ದು, ಅವರ ಪತ್ನಿ, ಇಬ್ಬರು ಮಕ್ಕಳು ಗಾಯಗೊಂಡಿದ್ದಾರೆ.

ಪತ್ನಿ ಆಯೀಶಾ ಅವರ ಕಾಲು, ಬಲಗೈಗೆ ಗಾಯಗಳಾಗಿವೆ. ಒಂದೂವರೆ ವರ್ಷದ ಮಗು ಆಫಿಯಾ ಬ್ರೈನ್ ಮೂಳೆ ಕಟ್ ಆಗಿದೆ. 4 ವರ್ಷದ ಬಾಲಕಿ ಆಲಿಯಾ ಕಾಲಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳಿಗೆ ಅಂಬೇಡ್ಕರ್ ಮೆಡಿಕಲ್ ಕಾಲೇಜಿನಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಅಂಬೇಡ್ಕರ್ ಮೆಡಿಕಲ್ ಕಾಲೇಜಿನಲ್ಲಿ ಜಂಶೀರ್ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಹೆಣ್ಣೂರು ಡಿಪೋ 10ಕ್ಕೆ ಸೇರಿದ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಡಿಕ್ಕಿಯಾಗಿದೆ ಎನ್ನಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read