ಬೆಂಗಳೂರು : ಬೆಂಗಳೂರಿನಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಓರ್ವನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ತಲಘಟ್ಟಪುರದ ಚಿಕ್ಕೇಗೌಡನ ಪಾಳ್ಯದಲ್ಲಿ ಲಾಂಗು, ಮಚ್ಚುಗಳೊಂದಿಗೆ ಬಂದ ದುಷ್ಕರ್ಮಿಗಳ ಗುಂಪೊಂದು ರೌಡಿಶೀಟರ್ ಓರ್ವನನ್ನು ಬರ್ಬರವಾಗಿ ಕೊಚ್ಚಿ ಹತ್ಯೆ ಮಾಡಿದೆ.
ಗಾಳಪ್ಪ ಅಲಿಯಾಸ್ ಹುಚ್ಚುಗಾಳ ಎಂಬಾತನನ್ನು ದುಷ್ಕರ್ಮಿಗಳು ಕೊಚ್ಚಿ ಕೊಲೆ ಮಾಡಿದ್ದಾರೆ. ಈತನ ವಿರುದ್ಧ
ಕೆಂಗೇರಿ, ತಾವರೆಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಈತ ಎರಡು ಕೊಲೆ ಕೇಸ್ ನಲ್ಲಿ ಕೂಡ ಭಾಗಿಯಾಗಿದ್ದನು.ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

