ಚಿತ್ರದುರ್ಗ: ಲಾರಿಗೆ ಡಿಕ್ಕಿ ಹೊಡೆದು ಇನೋವಾ ಕಾರ್ ನಲ್ಲಿದ್ದ ಇಬ್ಬರು ಸಾವನ್ನಪ್ಪಿದ ಘಟನೆ ಚಿತ್ರದುರ್ಗ ತಾಲೂಕಿನ ತಮಟಕಲ್ಲು ಗ್ರಾಮದ ಬಳಿ ನಡೆದಿದೆ.
ಕೊಲ್ಲಾಪುರದ ಡಿವೈಎಸ್ಪಿ ವೈಷ್ಣವಿ ಪ್ರಯಾಣಿಸುತ್ತಿದ್ದ ಕಾರ್ ಅಪಘಾತಕ್ಕೀಡಾಗಿದೆ. ಲಾರಿಗೆ ಡಿಕ್ಕಿ ಹೊಡೆದು ಕಾರ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಡಿವೈಎಸ್ಪಿ ಪಿ. ವೈಷ್ಣವಿ ಅವರ ತಾಯಿ ಕಮಲಾ(65), ಮತ್ತು ಕಾರ್ ಚಾಲಕ ರಾಕೇಶ್(40) ಮೃತಪಟ್ಟಿದ್ದಾರೆ. ಕಾರ್ ನಲ್ಲಿದ್ದ ಮಹಾರಾಷ್ಟ್ರದ ಕೊಲ್ಹಾಪುರದ ಡಿವೈಎಸ್ಪಿ ವೈಷ್ಣವಿ ಗಾಯಗೊಂಡಿದ್ದಾರೆ. ಮಹಾರಾಷ್ಟ್ರದಿಂದ ಬೆಂಗಳೂರಿಗೆ ಇನೋವಾ ಕಾರ್ ತೆರಳುತ್ತಿತ್ತು. ಅಪಘಾತದಲ್ಲಿ ಮೂವರು ಗಾಯಗೊಂಡಿದ್ದು, ಗಾಯಾಳುಗಳನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಘಟನಾ ಸ್ಥಳಕ್ಕೆ ಸಿಪಿಐ ಬಾಲಚಂದ್ರ ನಾಯ್ಕ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿತ್ರದುರ್ಗ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

