ಬೆಂಗಳೂರು: ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಿಸಲು ಲೋಕಾಯುಕ್ತ ಪೊಲೀಸರು ವಿಳಂಬ ಮಾಡಿದ್ದಾರೆ.
ಶೋಕಾಸ್ ನೋಟಿಸ್ ಗೆ ತನಿಖಾಧಿಕಾರಿ ಪ್ರತಿಕ್ರಿಯೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಒಪ್ಪಿಕೊಂಡಿಲ್ಲ. ವಿವರಣೆ ನೀಡಲು ಶಿವಮೊಗ್ಗ ಲೋಕಾಯುಕ್ತ ಎಸ್ಪಿಗೆ ಕೋರ್ಟ್ ಸೂಚನೆ ನೀಡಿದೆ.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು ಈ ಬಗ್ಗೆ ಸೂಚನೆ ನೀಡಿದ್ದಾರೆ. ಜುಲೈ 29ರಂದು ತನಿಖಾ ಪ್ರಗತಿ ವರದಿಯನ್ನು ಸಲ್ಲಿಸುವಂತೆ ಸೂಚನೆ ನೀಡಲಾಗಿದೆ.
ಏಪ್ರಿಲ್ 5ರಂದು ತನಿಖೆಗೆ ಆದೇಶಿಸಿ ಮೂರು ತಿಂಗಳಲ್ಲಿ ವರದಿ ನೀಡುವಂತೆ ನ್ಯಾಯಾಲಯ ಸೂಚನೆ ನೀಡಿತ್ತು. ಆದರೆ ಜುಲೈ 3ರಂದು ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಿದ್ದರು.