HomeLatest NewsBREAKING: KSRTC ಬಸ್- ಕಾರ್ ನಡುವೆ ಡಿಕ್ಕಿ: ಭೀಕರ ಅಪಘಾತದಲ್ಲಿ ಕಾರ್ ನಲ್ಲಿದ್ದ ಮೂವರು ಸ್ಥಳದಲ್ಲೇ...

BREAKING: KSRTC ಬಸ್- ಕಾರ್ ನಡುವೆ ಡಿಕ್ಕಿ: ಭೀಕರ ಅಪಘಾತದಲ್ಲಿ ಕಾರ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಹೊರವಲಯದ ಲಾಲಗೊಂಡನಹಳ್ಳಿ ಗೇಟ್ ಬಳಿ ಘಟನೆ ನಡೆದಿದೆ.

ಕೆಎಸ್ಆರ್ಟಿಸಿ ಬಸ್ ಮತ್ತು ಕಾರ್ ನ ನಡುವೆ ಭೀಕರ ಅಪಘಾತ ಸಂಭವಿಸಿದೆ. ಕೆಎಸ್ಆರ್ಟಿಸಿ ಬಸ್ ಗೆ ಕಾರ್ ಡಿಕ್ಕಿಯಾಗಿದ್ದು, ಅಪಘಾತದಲ್ಲಿ ಕಾರ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬಸ್ ನಲ್ಲಿದ್ದ ಹಲವು ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಚಿಕ್ಕಬಳ್ಳಾಪುರ ಕಡೆಯಿಂದ ದೇವನಹಳ್ಳಿ ಕಡೆಗೆ ಬರುತ್ತಿದ್ದ ಕಾರ್ ಅತಿ ವೇಗವಾಗಿ ಬಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಹಾರಿ ಕೆಎಸ್ಆರ್ಟಿಸಿ ಬಸ್ ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.  

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಸ್ ಗೆ ಡಿಕ್ಕಿಯಾದ ರಭಸಕ್ಕೆ ಕಾರ್ ಸಂಪೂರ್ಣ ನಜ್ಜುಗುಜ್ಜಾಗಿದೆ. ದೇವನಹಳ್ಳಿ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಧ್ಯರಾತ್ರಿ ಘಟನೆ ನಡೆದಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular