ಚಾಮರಾಜನಗರ: ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಕೌದಳ್ಳಿ ಸಮೀಪ ನಡೆದಿದೆ.
ಜೀವಾ(16) ಮೃತಪಟ್ಟ ಬಾಲಕ ಎಂದು ಹೇಳಲಾಗಿದೆ. ಬೈಕ್ ಗೆ ಪೆಟ್ರೋಲ್ ಹಾಕಿಸಲು ಹೊರಟಿದ್ದಾಗ ಬಸ್ ಡಿಕ್ಕಿ ಹೊಡೆದಿದೆ. ತಿರುವಿನಲ್ಲಿ ವೇಗವಾಗಿ ಬಂದ ಸರ್ಕಾರಿ ಬಸ್ ಬೈಕ್ ಗೆ ಡಿಕ್ಕಿ ಹೊಡೆದಿದೆ. ಸ್ಥಳದಲ್ಲೇ ಬಾಲಕ ಸಾವನ್ನಪ್ಪಿದ್ದಾನೆ.
ಜೀವಾ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಹನೂರು ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ರಾಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.