ಕಲಬುರಗಿ: ಕಲಬುರಗಿ ಜಿಲ್ಲೆ ಯಡ್ರಾಮಿ ತಾಲೂಕಿನ ರಾಸಣಗಿ ಕ್ರಾಸ್ ಬಳಿ ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಯುವತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಭೂಮಿಕ ಹಂಗರಗಾ(21) ಮೃತಪಟ್ಟ ಯುವತಿ ಎಂದು ಗುರುತಿಸಲಾಗಿದೆ. ಸವಾರ ಅಮೋಘಸಿದ್ದೇಶ್ವರ ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಜೇವರ್ಗಿಯಿಂದ ಸ್ವಗ್ರಾಮಕ್ಕೆ ತೆರಳುತ್ತಿದ್ದಾಗ ಹಿಂಬದಿಯಿಂದ ಸಾರಿಗೆ ಬಸ್ ಡಿಕ್ಕಿ ಹೊಡೆದಿದೆ. ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
