HomeLatest NewsBREAKING: ಸಲೂನ್ ನಲ್ಲಿ ಲೇಡಿ ಗ್ಯಾಂಗ್ ಅಟ್ಟಹಾಸ: ಮಾಲೀಕನ ಮೇಲೆ ಹಲ್ಲೆ, ಜೀವ ಬೆದರಿಕೆ

BREAKING: ಸಲೂನ್ ನಲ್ಲಿ ಲೇಡಿ ಗ್ಯಾಂಗ್ ಅಟ್ಟಹಾಸ: ಮಾಲೀಕನ ಮೇಲೆ ಹಲ್ಲೆ, ಜೀವ ಬೆದರಿಕೆ

ಬೆಂಗಳೂರಿನ ಭುವನೇಶ್ವರಿ ನಗರದ ಮುಖ್ಯ ರಸ್ತೆಯಲ್ಲಿ ಹೊಸ ಸಲೂನ್ ಮಾಡಿದ್ದಕ್ಕೆ ಮಾಲೀಕನ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಲಾಗಿದೆ.

ಸಂಜು ಎಂಬುವರು ಹೊಸದಾಗಿ ಸಲೂನ್ ತೆರದಿದ್ದು, ಅವರ ಮೇಲೆ ಈ ಹಿಂದೆ ಕೆಲಸ ಮಾಡುತ್ತಿದ್ದ ಸಲೂನ್ ಮಾಲೀಕರಾದ ಕಾವ್ಯಾ, ಮೊಹಮ್ಮದ್, ಸ್ಮಿತಾ ಹಲ್ಲೆ ಮಾಡಿದ್ದಾರೆ. ಇವರು ಸೇರಿ ಇಬ್ಬರು ಅಪರಿಚಿತರ ವಿರುದ್ಧ ಹಲ್ಲೆ ಜೀವ ಬೆದರಿಕೆ ಆರೋಪ ಕೇಳಿ ಬಂದಿದೆ.

ಪತಿಯ ಮೇಲೆ ಹಲ್ಲೆ ನಡೆಸಿ ಅಪಹರಣ ಮಾಡಿ ಚಿತ್ರಹಿಂಸೆ ನೀಡಿದ್ದಾರೆ. ನಿನ್ನೆ ರಾತ್ರಿ 8 ಗಂಟೆಗೆ ಹಲ್ಲೆ ನಡೆದಿದೆ ಎಂದು ಸಂಜು ಪತ್ನಿ ದೂರು ನೀಡಿದ್ದಾರೆ. ಅಮೃತಹಳ್ಳಿ ಪೋಲಿಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೊದಲು ಕಾವ್ಯಾ ಅವರ ಸಲೂನ್ ಮತ್ತು ಸ್ಪಾನಲ್ಲಿ ಸಂಜು ಕೆಲಸ ಮಾಡುತ್ತಿದ್ದರು. ಸಿನಿಮೀಯ ರೀತಿಯಲ್ಲಿ ಕಾವ್ಯಾ ಸಂಜು ಮೇಲೆ ಹಲ್ಲೆ ನಡೆಸಿದ್ದಾರೆ. ಸಿಗರೇಟ್ ಸೇದುತ್ತಾ ಸಂಜು ಮೇಲೆ ಹಲ್ಲೆ ನಡೆಸಿ ಕಾಲಿಂದ ಒದ್ದಿದ್ದಾರೆ.

ಹಲ್ಲೆಯ ನಂತರ ಅಪಹರಿಸಿ ಸಂಜುಗೆ ಚಿತ್ರ ಹಿಂಸೆ ನೀಡಲಾಗಿದೆ. ತಲೆ, ಬೆನ್ನು, ಮುಖಕ್ಕೆ ಗುದ್ದಿ ಅಟ್ಟಹಾಸ ಮೆರೆದಿದ್ದಾರೆ. ನೀಲಿ ಬಣ್ಣದ ಕಾರ್ ನಲ್ಲಿ ಬಂದು ಅಪಹರಿಸಿದ್ದಾರೆ. ಪೆಟ್ರೋಲ್ ಹಾಕಿ ಸುಟ್ಟು ಹಾಕುತ್ತೇನೆ ಎಂದು ಜೀವ ಬೆದರಿಕೆ ಹಾಕಿದ್ದಾರೆ.

ದಾಸರಹಳ್ಳಿ ಮುಖ್ಯ ರಸ್ತೆಯಿಂದ ಜಕ್ಕೂರು ಕಡೆ ಕರೆದುಕೊಂಡು ಹೋಗಿ ಪತಿ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಪತ್ನಿ ದೂರು ನೀಡಿದ್ದಾರೆ. ಸಿಸಿಟಿವಿ ಗಮನಿಸಿ ಪೊಲೀಸ್ ಠಾಣೆಗೆ ಬಂದು ಸಂಜು ಪತ್ನಿ ದೂರು ನೀಡಿದ್ದು, ಅಮೃತಹಳ್ಳಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular