ಬೆಂಗಳೂರು: ಸುಣ್ಣಘಟ್ಟದಲ್ಲಿ ನಾಡಬಾಂಬ್ ಸ್ಫೋಟಗೊಂಡು ವಕೀಲರೊಬ್ಬರಿಗೆ ಗಂಭೀರ ಗಾಯವಾಗಿದೆ. ಬೆಂಗಳೂರು ದಕ್ಷಿಣ ಜಿಲ್ಲೆ ಹಾರೋಹಳ್ಳಿ ತಾಲೂಕಿನ ಸುಣ್ಣಘಟ್ಟ ಗ್ರಾಮದಲ್ಲಿ ಘಟನೆ ನಡೆದಿದೆ.
ಫಾರ್ಮ್ ಹೌಸ್ ನ ಗೇಟ್ ಸಮೀಪ ದುಷ್ಕರ್ಮಿಗಳು ನಾಡಬಾಂಬ್ ಇಟ್ಟಿದ್ದರು. ಇದು ಸ್ಪೋಟಗೊಂಡು ವಕೀಲ ಎಂ.ಸಿ. ಮೋಹನ್ ಗಾಯಗೊಂಡಿದ್ದಾರೆ. ಸುಣ್ಣಘಟ್ಟದ ಜಮೀನಿನಲ್ಲಿ ಮೋಹನ್ ಫಾರ್ಮ್ ಹೌಸ್ ಹೊಂದಿದ್ದಾರೆ. ಆಗಾಗ ತೋಟದ ಮನೆಗೆ ವಕೀಲ ಮೋಹನ್ ಬಂದು ಹೋಗುತ್ತಿದ್ದರು. ಇಂದು ಬೆಳಗ್ಗೆ ಮನೆಯ ಗೇಟ್ ಓಪನ್ ಮಾಡುತ್ತಿದ್ದಂತೆ ನಾಡಬಾಂಬ್ ಸ್ಫೋಟಗೊಂಡಿದೆ. ಗಂಭೀರವಾಗಿ ಗಾಯಗೊಂಡಿರುವ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೋಡಿಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

