HomeLatest NewsBREAKING: ಹೃದಯಾಘಾತದಿಂದ ಉಪನ್ಯಾಸಕ ಸಾವು, ತಡವಾಗಿ ಬೆಳಕಿಗೆ ಬಂದ ಘಟನೆ

BREAKING: ಹೃದಯಾಘಾತದಿಂದ ಉಪನ್ಯಾಸಕ ಸಾವು, ತಡವಾಗಿ ಬೆಳಕಿಗೆ ಬಂದ ಘಟನೆ

ಬೆಂಗಳೂರು: ಹೃದಯಾಘಾತದಿಂದಾಗಿ ಖಾಸಗಿ ಕಾಲೇಜಿನ ಉಪನ್ಯಾಸಕ ಸಾವನ್ನಪ್ಪಿದ್ದಾರೆ. ಭಾನುವಾರ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕು ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ನಿವೃತ್ತ ಐಎಎಸ್ ಅಧಿಕಾರಿ ಶಶಾಂಕ್ ಅವರ ಪುತ್ರ ಶ್ರೇಯಸ್(33) ಸಾವನ್ನಪ್ಪಿದ್ದಾರೆ. ಮೃತಪಟ್ಟಿರುವ ಶ್ರೇಯಸ್ ಮೂಲತಃ ಪಶ್ಚಿಮ ಬಂಗಾಳದವರಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸೋಲದೇವನಹಳ್ಳಿಯ ಖಾಸಗಿ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಕೆರೆಗುಡ್ಡದಹಳ್ಳಿಯಲ್ಲಿ ಒಬ್ಬರೇ ವಾಸವಾಗಿದ್ದರು. ಅವರು ಭಾನುವಾರ ಮೃತಪಟ್ಟಿರುವ ಬಗ್ಗೆ ಮಾಹಿತಿ ಗೊತ್ತಾಗಿದೆ.

ಕೋಣೆಯಲ್ಲಿ ದುರ್ವಾಸನೆ ಬರುತ್ತಿದ್ದರಿಂದ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಶ್ರೇಯಸ್ ವಾಸವಿದ್ದ ಮನೆಯ ಅಕ್ಕ-ಪಕ್ಕದ ಮನೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಬಂದು ಬಾಗಿಲು ಮುರಿದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಸೋಲದೇವನಹಳ್ಳಿ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular