ಬೆಂಗಳೂರು : ಫೆ.12 ರಿಂದ ವಿಧಾನಮಂಡಲ ಅಧಿವೇಶನ ಆರಂಭವಾಗಲಿದ್ದು, ಫೆ.16 ರಂದು ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ ಮಂಡನೆ ಮಾಡಲಿದ್ದಾರೆ.
ಮುಂದಿನ ತಿಂಗಳು ಫೆಬ್ರವರಿ 12ರಿಂದ ಫೆಬ್ರವರಿ 23ರವರೆಗೆ ರಾಜ್ಯ ವಿಧಾನಮಂಡಲ ಅಧಿವೇಶನ ಆರಂಭವಾಗಲಿದ್ದು, ಫೆಬ್ರವರಿ 16ರಂದು ಕರ್ನಾಟಕ ರಾಜ್ಯ ಬಜೆಟ್ ಮಂಡನೆಯಾಗಲಿದೆ. ಇನ್ನು ವಿಧಾನಮಂಡಲ ಅಧಿವೇಶನ ಅಧಿವೇಶನದ ಮೊದಲ ದಿನ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಷಣ ಮಾಡಲಿದ್ದಾರೆ. ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಇನ್ನೂ ಇಂದು ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿರುವ ವಿವಿಧ ಸಮುದಾಯಗಳಿಗೆ ಒಳಮೀಸಲಾತಿಯನ್ನು ಕಲ್ಪಿಸಲು ಸಂವಿಧಾನಕ್ಕೆ ತಿದ್ದುಪಡಿ ತರುವಂತೆ ಕೇಂದ್ರಕ್ಕೆ ಶಿಫಾರಸು ಮಾಡಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ.