ಕೇರಳ : ಜೈಲಿನಿಂದ ಪರಾರಿಯಾಗಿದ್ದ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಖೈದಿ ಸಿನಿಮೀಯ ರೀತಿಯಲ್ಲಿ ಅರೆಸ್ಟ್ ಆಗಿದ್ದಾನೆ. ಕಣ್ಣೂರು ಜೈಲಿನಿಂದ ಸುಮಾರು 3 ಕಿ.ಮೀ ದೂರದಲ್ಲಿರುವ ತಲಾಪ್ನಲ್ಲಿರುವ ಪಾಳುಬಿದ್ದ ಮನೆಯ ಬಾವಿಯಲ್ಲಿ ಗೋವಿಂದಚಾಮಿ ಅಡಗಿಕೊಂಡಿರುವುದು ಕಂಡುಬಂದಿದ್ದು, ಸ್ಥಳೀಯ ನಿವಾಸಿಗಳು ಅವರಿಗೆ ಈ ಬಗ್ಗೆ ಮಾಹಿತಿ ನೀಡಿದ್ದರು, ನಂತರ ಖೈದಿಯನ್ನು ಸಿನಿಮೀಯ ರೀತಿಯಲ್ಲಿ ಅರೆಸ್ಟ್ ಮಾಡಲಾಗಿದೆ.
2011 ರ ಸೌಮ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಪರಾಧಿ ಗೋವಿಂದಚಾಮಿ ಕೇರಳದ ಕಣ್ಣೂರು ಕೇಂದ್ರ ಕಾರಾಗೃಹದಿಂದ ಪರಾರಿಯಾಗಿದ್ದಾನು. ಬೆಳಗಿನ ಜಾವ ಆತನ ಸೆಲ್ನಲ್ಲಿ ತಪಾಸಣೆ ನಡೆಸುತ್ತಿದ್ದಾಗ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ಜೈಲು ಅಧಿಕಾರಿಗಳು ತಕ್ಷಣ ಜೈಲು ಆವರಣದಲ್ಲಿ ಮತ್ತು ಸುತ್ತಮುತ್ತ ಶೋಧ ಕಾರ್ಯಾಚರಣೆ ನಡೆಸಿದರು, ಆದರೆ ಕೈದಿ ಎಲ್ಲಿಯೂ ಪತ್ತೆಯಾಗಿರಲಿಲ್ಲ.
ಫೆಬ್ರವರಿ 1, 2011 ರಂದು ಎರ್ನಾಕುಲಂನಿಂದ ಶೋರನೂರಿಗೆ ಹೋಗುವ ಪ್ಯಾಸೆಂಜರ್ ರೈಲಿನಲ್ಲಿ ಒಂಟಿಯಾಗಿ ಪ್ರಯಾಣಿಸುತ್ತಿದ್ದಾಗ ಶೋರ್ನೂರ್ ಬಳಿಯ ಮಂಜಕ್ಕಾಡ್ನ 23 ವರ್ಷದ ಸೌಮ್ಯಾ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿತ್ತು.