HomeLatest NewsBREAKING: ಮದ್ದೂರಿನಲ್ಲಿ ಲೈಟ್ ಆಫ್ ಮಾಡಿ ಗಣೇಶ ಮೆರವಣಿಗೆ ಮೇಲೆ ಕಲ್ಲು ತೂರಾಟ, ನಿಷೇಧಾಜ್ಞೆ ಜಾರಿ:...

BREAKING: ಮದ್ದೂರಿನಲ್ಲಿ ಲೈಟ್ ಆಫ್ ಮಾಡಿ ಗಣೇಶ ಮೆರವಣಿಗೆ ಮೇಲೆ ಕಲ್ಲು ತೂರಾಟ, ನಿಷೇಧಾಜ್ಞೆ ಜಾರಿ: ಹೈ ಅಲರ್ಟ್

ಮಂಡ್ಯ: ಮಂಡ್ಯ ಜಿಲ್ಲೆ ಮದ್ದೂರು ಪಟ್ಟಣದಲ್ಲಿ ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದ್ದು ಪರಿಸ್ಥಿತಿ ಉದ್ವಿಗ್ನಗೊಂಡಿದ್ದ ಹಿನ್ನೆಲೆಯಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಪರಿಸ್ಥಿತಿ ತಿಳಿಗೊಳಿಸಿದ್ದು, ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ನಾಳೆ ಬೆಳಗ್ಗೆಯವರೆಗೆ ನಿಷೇಧಾಜ್ಞೆ ಜಾರಿ ಮಾಡಿ ಆದೇಶ ಹೊರಡಿಸಲಾಗಿದೆ.

ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ ನೇತೃತ್ವದಲ್ಲಿ ರೂಟ್ ಮಾರ್ಚ್ ನಡೆಸಲಾಗಿದೆ. ಮದ್ದೂರು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಪೊಲೀಸರು ಪಥಸಂಚಲನ ನಡೆಸಿದ್ದಾರೆ.

ತಮಿಳು ಕಾಲೋನಿ ಯುವಕರು ಗಣೇಶ ಪ್ರತಿಷ್ಠಾಪನೆ ಮಾಡಿದ್ದರು. ನಿನ್ನೆ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಕಲ್ಲುತೂರಾಟವಾಗಿದೆ ಎಂದು ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಮರಹಿಮ್ ನಗರದಲ್ಲಿ ಮೆರವಣಿಗೆಯ ವೇಳೆ ಕಲ್ಲು ತೂರಾಟ ನಡೆದಿದೆ. ಲೈಟ್ ಆಫ್ ಮಾಡಿ ಕಲ್ಲು ತೂರಾಟ ಮಾಡಿದ್ದಾರೆ ಎನ್ನುವ ಆರೋಪವಿದೆ. ಘಟನೆ ಸಂಭಂದ 2 ಕೇಸು ದಾಖಲಿಸಲಾಗಿದೆ. 21 ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಇಬ್ಬರು ಮಾತ್ರ ಚನ್ನಪಟ್ಟಣದವರು. ಉಳಿದವರು ಸ್ಥಳೀಯರು. ನಾಳೆ ಬೆಳಗ್ಗೆವರೆಗೆ ಮದ್ದೂರಿನಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಕಲ್ಲು ತೂರಾಟದ ವೇಳೆ ಮೂವರು ಯುವಕರಿಗೆ ಪೆಟ್ಟು ಬಿದ್ದಿದೆ. ಇಬ್ಬರು ಪೊಲೀಸ್ ಸಿಬ್ಬಂದಿಗೆ ಏಟು ಬಿದ್ದಿದೆ ಎಂದು ಮದ್ದೂರಿನಲ್ಲಿ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular