HomeKarnatakaBREAKING : ಚಿಕ್ಕಬಳ್ಳಾಪುರದಲ್ಲಿ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಸಾವು ; ಕಂಬದಲ್ಲೇ ನೇತಾಡಿದ ಶವ..!

BREAKING : ಚಿಕ್ಕಬಳ್ಳಾಪುರದಲ್ಲಿ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಸಾವು ; ಕಂಬದಲ್ಲೇ ನೇತಾಡಿದ ಶವ..!

ಚಿಕ್ಕಬಳ್ಳಾಪುರ : ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಕಂಬದಲ್ಲೇ ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನ ತಾಲೂಕಿನ ಬಿಸಲಹಳ್ಳಿಯಲ್ಲಿ ನಡೆದಿದೆ.

ಮೃತರನ್ನು ಲೈನ್ ಮ್ಯಾನ್ ಉದಯ್ ಆಚಾರ್ ಎಂದು ಗುರುತಿಸಲಾಗಿದೆ. ಕಂಬ ಹತ್ತಿ ವಿದ್ಯುತ್ ದುರಸ್ಥಿ ಮಾಡುತ್ತಿದ್ದ ಸಂದರ್ಭದಲ್ಲಿ ವಿದ್ಯುತ್ ಪ್ರವಹಿಸಿ ಕಂಬದಲ್ಲೇ ಲೈನ್ ಮ್ಯಾನ್ ಮೃತಪಟ್ಟಿದ್ದು, ಶವ ಕೆಲಹೊತ್ತು ಕಂಬದಲ್ಲೇ ನೇತಾಡಿದೆ.

ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಲೈನ್ ಮ್ಯಾನ್ ಮೃತಪಟ್ಟಿದ್ದಾರೆ. ಕಂಬದಿಂದ ಇಳಿಯುವ ಮುನ್ನವೇ ಕರೆಂಟ್ ಚಾರ್ಜ್ ಮಾಡಲಾಗಿದೆ ಎಂದು ಗ್ರಾಮಸ್ಥರು ಆಕ್ರೋಶ ಹೊರ ಹಾಕಿದ್ದಾರೆ. ಮೃತ ಉದಯ್ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದ್ದು, ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular