HomeIndiaBREAKING : ಲೋಕಸಭೆ ಮತ್ತು ರಾಜ್ಯಸಭೆ ಕಲಾಪ ಇಂದು ಮಧ್ಯಾಹ್ನ 2 ಗಂಟೆಗೆ ಮುಂದೂಡಿಕೆ |Lok...

BREAKING : ಲೋಕಸಭೆ ಮತ್ತು ರಾಜ್ಯಸಭೆ ಕಲಾಪ ಇಂದು ಮಧ್ಯಾಹ್ನ 2 ಗಂಟೆಗೆ ಮುಂದೂಡಿಕೆ |Lok sabha and rajya sabha adjourned

ನವದೆಹಲಿ : ಸಂಸತ್’ನಲ್ಲಿ ಬಿಜೆಪಿ-ಕಾಂಗ್ರೆಸ್ ಪಕ್ಷಗಳ ನಡುವೆ ನಡೆದ ಕೋಲಾಹಲದ ನಡುವೆ ಲೋಕಸಭೆ ಮತ್ತು ರಾಜ್ಯಸಭೆ ಕಲಾಪ ವನ್ನು ಮಧ್ಯಾಹ್ನ 2 ಗಂಟೆಯವರೆಗೆ ಮುಂದೂಡಲಾಯಿತು.

ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ನೀಡಿದ ಹೇಳಿಕೆಗೆ ಗೃಹ ಸಚಿವ ಅಮಿತ್ ಶಾ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿ ಪ್ರತಿಪಕ್ಷಗಳು ಗದ್ದಲ ಎಬ್ಬಿಸಿದ ಹಿನ್ನೆಲೆಯಲ್ಲಿ ಲೋಕಸಭೆ ಮತ್ತು ರಾಜ್ಯಸಭೆಯನ್ನು ಮುಂದೂಡಲಾಯಿತು. ನಿಯಮ 267 ರ ಅಡಿಯಲ್ಲಿ ಪ್ರತಿಪಕ್ಷಗಳ 4 ಗೊತ್ತುವಳಿಗಳನ್ನು ವಜಾಗೊಳಿಸಿದ ನಂತರ ಕೋಲಾಹಲದ ಮಧ್ಯೆ, ರಾಜ್ಯಸಭೆ ಲೋಕಸಭೆ ಯನ್ನು ಮಧ್ಯಾಹ್ನ 2 ಗಂಟೆಯವರೆಗೆ ಮುಂದೂಡಲಾಯಿತು.

ಬಾಬಾ ಸಾಹೇಬ್ ಅಂಬೇಡ್ಕರ್ ಬಗ್ಗೆ ಅಮಿತ್ ಶಾ ಅವರ ಹೇಳಿಕೆಗೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ, ಸಂವಿಧಾನ ರಚನಾಕಾರ ಎಂದು ಪರಿಗಣಿಸಲ್ಪಟ್ಟ ವ್ಯಕ್ತಿಯ ಬಗ್ಗೆ ಬಿಜೆಪಿಗೆ ಮೂಲಭೂತ ಗೌರವವಿಲ್ಲ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular