ತುಮಕೂರು: ಡಿಹೆಚ್ಒ ಕಚೇರಿಯ ಲೆಕ್ಕಪತ್ರ ವ್ಯವಸ್ಥಾಪಕ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ತುಮಕೂರು ಡಿಎಚ್ಒ ಕಚೇರಿಯಲ್ಲಿ 12 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಅರವಿಂದ್ ಲೋಕಾಯುಕ್ತ ಬಲೆಗೆ ಬಿದ್ದವರು.
ಬಿಲ್ ಪಾವತಿಸಲು ಅರವಿಂದ್ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಆರೋಗ್ಯ ಜಾಗೃತಿ ಬಗ್ಗೆ ವಸ್ತು ಪ್ರದರ್ಶನ ಕಾರ್ಯಕ್ರಮ ನಡೆಸಲಾಗಿತ್ತು. 10 ತಾಲೂಕುಗಳಲ್ಲಿ ಜಾತ್ರೆ, ಸಂತೆಗಳಲ್ಲಿ ವಸ್ತು ಪ್ರದರ್ಶನ ಕಾರ್ಯಕ್ರಮ ನಡೆಸಿದ್ದು, ವಸ್ತು ಪ್ರದರ್ಶನದ 1.98 ಲಕ್ಷ ರೂಪಾಯಿ ಬಿಲ್ ಪಾವತಿಸಬೇಕಿತ್ತು.
ಈ ವೇಳೆ ಲೆಕ್ಕಪತ್ರ ವ್ಯವಸ್ಥಾಪಕ ಅರವಿಂದ್ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. 12,000 ಲಂಚಕ್ಕೆ ಬೇಡಿಕೆ ಇಟ್ಟಿದ್ದು, ಎನ್ಜಿಒ ಅಧ್ಯಕ್ಷ ರಾಜಶೇಖರ ಬಳಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ಲಂಚದ ಹಣದ ಸಮೇತ ವಶಕ್ಕೆ ಪಡೆದಿದ್ದಾರೆ.

