ಯಾದಗಿರಿ: ಯಾದಗಿರಿ ಡಿಹೆಚ್ಒ ಕಚೇರಿಯ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಡಿಹೆಚ್ಒ ಕಚೇರಿಯಲ್ಲಿ 20 ಸಾವಿರ ರೂಪಾಯಿ ಲಂಚ ಸ್ವೀಕರಿಸುವಾಗ ಆಡಳಿತ ಮತ್ತು ಕಾರ್ಯಕ್ರಮ ಸಹಾಯಕ ಅಧಿಕಾರಿ ಶ್ರೀಕಾಂತ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಶ್ರೀಕಾಂತ್ ಬಾವಿಮನಿ ಜಿಲ್ಲಾ ಗುಣಮಟ್ಟ ಭರವಸೆ ಘಟಕದ ಅನುದಾನ ಬಿಡುಗಡೆಗಾಗಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. 1.3 ಲಕ್ಷ ರೂ. ಅನುದಾನ ಬಿಡುಗಡೆಗೆ 20 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಪರಶುರಾಮ ಆಳಂದ ಎಂಬಾತ ಲೋಕಾಯುಕ್ತರಿಗೆ ದೂರು ನೀಡಿದ್ದರು. ಕಚೇರಿಯಲ್ಲಿ ಲಂಚ ಪಡೆಯುತ್ತಿದ್ದಾಗ ಶ್ರೀಕಾಂತ್ ಲೋಕಾಯುಕ್ತ ಬಲಕ್ಕೆ ಬಿದ್ದಿದ್ದಾರೆ. ಯಾದಗಿರಿ ಲೋಕಾಯುಕ್ತ ಡಿವೈಎಸ್ಪಿ ಇನಾಂದಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.

