HomeLatest NewsBREAKING: ಹೊರಗುತ್ತಿಗೆ ನೌಕರನಿಂದ ಲಂಚ ಸ್ವೀಕರಿಸುತ್ತಿದ್ದ ಮೂವರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ

BREAKING: ಹೊರಗುತ್ತಿಗೆ ನೌಕರನಿಂದ ಲಂಚ ಸ್ವೀಕರಿಸುತ್ತಿದ್ದ ಮೂವರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ

ಮಂಗಳೂರು: ಹೊರಗುತ್ತಿಗೆ ನೌಕರನಿಂದ ಲಂಚ ಸ್ವೀಕರಿಸುತ್ತಿದ್ದ ಮೂವರು ಅಧಿಕಾರಿಗಳನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಉಳ್ಳಾಲ ತಾಲೂಕು ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಯ ಸರ್ವೆಯರ್ ಕೃಷ್ಣಮೂರ್ತಿ, ಮಂಗಳೂರು ತಾಲೂಕು ಭೂ ದಾಖಲೆಗಳ ಸಹಾಯಕ ನಿರ್ದೇಶಕ ಬಿ.ಕೆ. ರಾಜು ಮತ್ತು ಸರ್ವೆ ಸೂಪರ್ ವೈಸರ್ ಎಸ್. ಧನಶೇಖರ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು.

ತನ್ನ ಬಾಕಿ ಸಂಬಳದ ಬಿಲ್ ಮಾಡಿಕೊಡಲು ಮತ್ತು ಹೊರಗುತ್ತಿಗೆ ಆಧಾರದಲ್ಲಿ ಕರ್ತವ್ಯ ಮುಂದುವರಿಸಲು ನೇಮಕಾತಿ ಆದೇಶ ಮಾಡಿಸಿಕೊಡಲು ಕೃಷ್ಣಮೂರ್ತಿ 50,000 ರೂ., ಬಿ.ಕೆ. ರಾಜು ಹಾಗೂ ಎಸ್. ಧನಶೇಖರ ತಲಾ 10,000 ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಕುರಿತಾಗಿ ಗುತ್ತಿಗೆ ನೌಕರ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಕೃಷ್ಣಮೂರ್ತಿ 20,000 ರೂ., ಧನಶೇಖರ ಮತ್ತು ಬಿ.ಕೆ. ರಾಜು ತಲಾ 5,000 ರೂ. ಲಂಚ ಸ್ವೀಕರಿಸುತ್ತಿದ್ದಾಗ ದಾಳಿ ಮಾಡಿ ವಶಕ್ಕೆ ಪಡೆಯಲಾಗಿದೆ. ಲೋಕಾಯುಕ್ತ ಎಸ್ಪಿ ಕುಮಾರಚಂದ್ರ ಅವರ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಡಾ. ಗಾನ ಪಿ ಕುಮಾರ್, ಸುರೇಶ ಕುಮಾರ್, ನಿರೀಕ್ಷಕರಾದ ಭಾರತಿ ಜಿ. ಚಂದ್ರಶೇಖರ್, ಕೆ.ಎನ್. ರವಿ ಪವಾರ್, ರಾಜೇಂದ್ರ ನಾಯ್ಕ ಅವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular