ದಾವಣಗೆರೆ: ಹೊನ್ನಾಳಿ ಸಹಕಾರ ಸಂಘಗಳ ಅಭಿವೃದ್ಧಿ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ದಾವಣಗೆರೆ ಜಿಲ್ಲೆ ಹೊನ್ನಾಳಿಯ ಸಹಕಾರ ಸಂಘಗಳ ಅಭಿವೃದ್ಧಿ ಅಧಿಕಾರಿ ಸತೀಶ್ ನಾಯ್ಕ್ ಬಲೆಗೆ ಬಿದ್ದ ವರು.
ಕಚೇರಿಯಲ್ಲಿ ಮೂರು ಸಾವಿರ ರೂಪಾಯಿ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಚೀಲಾಪುರ ಗ್ರಾಮದ ಹಾಲು ಉತ್ಪಾದಕರ ಸಂಘದ ಚುನಾವಣೆ ನಡೆಸಲು ರೈತ ದೇವರಾಜ್ ಅವರಿಂದ ಸತೀಶ್ ನಾಯ್ಕ್ ಲಂಚ ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ದಾಳಿ ನಡೆಸಲಾಗಿದೆ.
ಲೋಕಾಯುಕ್ತ ಎಸ್ಪಿ ಎಂ.ಎಸ್. ಕೌಲಾಪುರೆ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಕಲಾವತಿ, ಇನ್ಸ್ಪೆಕ್ಟರ್ ಗಳಾದ ಸರಳಾ, ಗುರು ಬಸವರಾಜ್ ಅವರ ತಂಡ ದಾಳಿ ನಡೆಸಿದ್ದಾರೆ.