HomeLatest NewsBREAKING: ರೈತನಿಂದ ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ

BREAKING: ರೈತನಿಂದ ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ

ದಾವಣಗೆರೆ: ಹೊನ್ನಾಳಿ ಸಹಕಾರ ಸಂಘಗಳ ಅಭಿವೃದ್ಧಿ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ದಾವಣಗೆರೆ ಜಿಲ್ಲೆ ಹೊನ್ನಾಳಿಯ ಸಹಕಾರ ಸಂಘಗಳ ಅಭಿವೃದ್ಧಿ ಅಧಿಕಾರಿ ಸತೀಶ್ ನಾಯ್ಕ್ ಬಲೆಗೆ ಬಿದ್ದ ವರು.

ಕಚೇರಿಯಲ್ಲಿ ಮೂರು ಸಾವಿರ ರೂಪಾಯಿ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಚೀಲಾಪುರ ಗ್ರಾಮದ ಹಾಲು ಉತ್ಪಾದಕರ ಸಂಘದ ಚುನಾವಣೆ ನಡೆಸಲು ರೈತ ದೇವರಾಜ್ ಅವರಿಂದ ಸತೀಶ್ ನಾಯ್ಕ್ ಲಂಚ ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ದಾಳಿ ನಡೆಸಲಾಗಿದೆ.

ಲೋಕಾಯುಕ್ತ ಎಸ್ಪಿ ಎಂ.ಎಸ್. ಕೌಲಾಪುರೆ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಕಲಾವತಿ, ಇನ್ಸ್ಪೆಕ್ಟರ್ ಗಳಾದ ಸರಳಾ,  ಗುರು ಬಸವರಾಜ್ ಅವರ ತಂಡ ದಾಳಿ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular