HomeLatest NewsBREAKING: ಕೊಪ್ಪಳದಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

BREAKING: ಕೊಪ್ಪಳದಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

ಕೊಪ್ಪಳ: ಕೊಪ್ಪಳದಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಕಿಮ್ಸ್ ಆಡಳಿತಾಧಿಕಾರಿಯ ನಿವಾಸ, ಕಾಲೇಜು ಸೇರಿದಂತೆ 6 ಕಡೆ ದಾಳಿ ನಡೆಸಲಾಗಿದೆ.

ಕೊಪ್ಪಳ ತಾಲೂಕಿನ ಭಾಗ್ಯನಗರದಲ್ಲಿರುವ ಬಿ. ಕಲ್ಲೇಶ್ ಅವರ ನಿವಾಸದ ಮೇಲೆ ದಾಳಿ ಮಾಡಲಾಗಿದೆ. ಕಿಮ್ಸ್ ಆಡಳಿತಾಧಿಕಾರಿ ಬಿ. ಕಲ್ಲೇಶ್ ಅವರ ಸಂಬಂಧಿಕರ ಮನೆಗಳ ಮೇಲೂ ದಾಳಿ ನಡೆದಿದೆ. 30 ಜನರ ತಂಡದಿಂದ ಏಕಕಾಲಕ್ಕೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಲಾಗಿದೆ. ಕೊಪ್ಪಳ ಲೋಕಾಯುಕ್ತ ಡಿವೈಎಸ್ಪಿ ಲೋಕೇಶ್, ಗದಗ, ಹಾವೇರಿ, ರಾಯಚೂರು ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ.

ಈ ಹಿಂದೆ ವಾಲ್ಮೀಕಿ ನಿಗಮ ಹಗರಣದಲ್ಲಿ ಕಲ್ಲೇಶ್ ಸುದ್ದಿಯಾಗಿದ್ದರು. ವಾಲ್ಮೀಕಿ ಹಗರಣದ ವೇಳೆ ಇಡಿ ವಿರುದ್ಧ ಅವರು ಆರೋಪ ಮಾಡಿದ್ದರು. ಅವರನ್ನು ಅಮಾನತು ಮಾಡಲಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular