ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ ಅಧಿಕಾರಿ ಮನೆಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.
ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕು ಆರೋಗ್ಯಾಧಿಕಾರಿ ಡಾ. ವೆಂಕಟೇಶ್ ಮನೆ ಮೇಲೆ ದಾಳಿ ನಡೆಸಲಾಗಿದೆ. ಹಿರಿಯೂರು ಪಟ್ಟಣದ ಯರಗುಂಟೇಶ್ವರ ಬಡಾವಣೆಯ ಮನೆ, ಆದಿವಾಲ ಗ್ರಾಮದ ಮನೆ ಮತ್ತು ಕ್ಲಿನಿಕ್ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ.
ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಆರೋಪ ಹಿನ್ನಲೆಯಲ್ಲಿ ದಾಳಿ ನಡೆದಿದೆ. ಲೋಕಾಯುಕ್ತ ಎಸ್ಪಿ ವಾಸುದೇವರಾಮ್, ಡಿವೈಎಸ್ಪಿ ಮೃತ್ಯುಂಜಯ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.