ಬೆಂಗಳೂರು: ಆದಾಯ ಮೀರಿದ ಆಸ್ತಿ ಗಳಿಕೆ ಆರೋಪ ಹಿನ್ನೆಲೆಯಲ್ಲಿ ಬಿಡಿಎ ನೌಕರನ ಮನೆ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ.
ಬೆಂಗಳೂರಿನ ಬಸವೇಶ್ವರ ನಗರದಲ್ಲಿರುವ ಬಿಡಿಎ ಸೂಪರ್ ವೈಸರ್ ವೆಂಕಟೇಶ್ ನಿವಾಸದ ಮೇಲೆ ದಾಳಿ ನಡೆಸಲಾಗಿದೆ. ವೆಂಕಟೇಶ್ ಗೆ ಸಂಬಂಧಿಸಿದ ಐದು ಕಡೆಗಳಲ್ಲಿ ಲೋಕಾಯುಕ್ತ ದಾಳಿ ನಡೆದಿದೆ.
ನಿವಾಸ, ಕಚೇರಿ, ಸಂಬಂಧಿಕರ ಮನೆಯಲ್ಲಿ ಪರಿಶೀಲನೆ ನಡೆಸಲಾಗಿದ್ದು, ದಾಳಿಯಲ್ಲಿ ವೆಂಕಟೇಶ್ ಅಸಮತೋಲನ ಆಸ್ತಿ ಹೊಂದಿರುವುದು ಪತ್ತೆಯಾಗಿದೆ.
ದಾಳಿಯ ವೇಳೆ 90.77 ಲಕ್ಷ ರೂಪಾಯಿ ಮೌಲ್ಯದ ಸ್ಥಿರಾಸ್ತಿ ಪತ್ತೆಯಾಗಿದೆ. 7 ನಿವೇಶನ, ವಾಸದ ಮನೆ, 6 ಎಕರೆ 20 ಗುಂಟೆ ಕೃಷಿ ಜಮೀನು ಪತ್ತೆಯಾಗಿದೆ. ಚಿನ್ನಾಭರಣ, ವಾಹನಗಳು, 1.4 ಲಕ್ಷ ಬ್ಯಾಂಕ್ ಠೇವಣಿ ಸೇರಿ 62.82 ಲಕ್ಷ ಮೌಲ್ಯದ ಚರಾಸ್ತಿ ಪತ್ತೆಯಾಗಿದೆ. ಒಟ್ಟಾರೆ 1.53 ಕೋಟಿ ರೂ. ಅಸಮತೋಲನ ಆಸ್ತಿ ಪತ್ತೆಯಾಗಿದೆ ಎನ್ನಲಾಗಿದ್ದು, ಲೋಕಾಯುಕ್ತ ಅಧಿಕಾರಿಗಳು ತನಿಖೆ ಮುಂದುವರಿಸಿದ್ದಾರೆ.

