ದಾವಣಗೆರೆ: ದಾವಣಗೆರೆ ಎಪಿಎಂಸಿ ಸಹಾಯಕ ನಿರ್ದೇಶಕ ಪ್ರಭು ನಿವಾಸ, ಕಚೇರಿ, ಸಂಬಂಧಿಕರ ಮನೆಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ.
ಎಪಿಎಂಸಿ ಕೃಷಿ ಮಾರಾಟ ವಿಭಾಗದ ಸಹಾಯಕ ನಿರ್ದೇಶಕ ಜೆ. ಪ್ರಭು ಅವರ ನಿವಾಸದ ಮೇಲೆ ದಾಳಿ ನಡೆಸಲಾಗಿದೆ ದಾವಣಗೆರೆ ನಗರದ ಆಂಜನೇಯ ಬಡಾವಣೆಯಲ್ಲಿರುವ ಪ್ರಭು ನಿವಾಸದ ಮೇಲೆ ದಾಳಿ ನಡೆಸಲಾಗಿದೆ.
ದಾವಣಗೆರೆ ಲೋಕಾಯುಕ್ತ ಎಸ್ಪಿ ಎಂ.ಎಸ್. ಕೌಲಾಪುರೆ ನೇತೃತ್ವದಲ್ಲಿ ದಾಳಿ ಮಾಡಲಾಗಿದ್ದು, ಆಸ್ತಿ ದಾಖಲೆಗಳ ಪರಿಶೀಲನೆ ನಡೆಸಲಾಗಿದೆ. ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಹಿನ್ನೆಲೆಯಲ್ಲಿ ದಾಳಿ ನಡೆದಿದೆ.
