HomeLatest NewsBREAKING: ಮೆಗ್ಗಾನ್ ಆಸ್ಪತ್ರೆ ಮೇಲೆ ಲೋಕಾಯುಕ್ತ ದಾಳಿ: ಲಕ್ಷಾಂತರ ಮೌಲ್ಯದ ಅಕ್ರಮ ಔಷಧ ಪತ್ತೆ

BREAKING: ಮೆಗ್ಗಾನ್ ಆಸ್ಪತ್ರೆ ಮೇಲೆ ಲೋಕಾಯುಕ್ತ ದಾಳಿ: ಲಕ್ಷಾಂತರ ಮೌಲ್ಯದ ಅಕ್ರಮ ಔಷಧ ಪತ್ತೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಮೆಗ್ಗಾನ್ ಭೋದನಾ ಆಸ್ಪತ್ರೆಗೆ ಲೋಕಾಯುಕ್ತ ಪೊಲೀಸರು ಇಂದು ಅನಿರೀಕ್ಷಿತ ಭೇಟಿ ನೀಡಿದ್ದಾರೆ. ಔಷಧ ದಾಸ್ತಾನು ವಿಭಾಗದಲ್ಲಿ ಪರಿಶೀಲನೆ ವೇಳೆ ಅಕ್ರಮ ಔಷಧ ಪತ್ತೆಯಾಗಿದೆ.

ಇಂದು ಸಂಜೆ 4 ಗಂಟೆಗೆ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಮಂಜುನಾಥ್ ಚೌದರಿ ಎಂ.ಹೆಚ್ ಅವರು ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯ ಅಧಿಕಾರಿಗಳಾದ ರುದ್ರೇಶ್ ಕೆ.ಪಿ. ಪೊಲೀಸ್ ನಿರೀಕ್ಷಕರು ಮತ್ತು ಸಿಬ್ಬಂದಿಗಳೊಂದಿಗೆ ಶಿವಮೊಗ್ಗ ಜಿಲ್ಲಾ ಮೆಗ್ಗಾನ್ ಭೋದನಾ ಆಸ್ಪತ್ರೆಗೆ ಅನಿರೀಕ್ಷಿತ ಭೇಟಿ ನೀಡಿ ಔಷದ ದಾಸ್ತಾನು ವಿಭಾಗಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.

ಈ ಸಮಯದಲ್ಲಿ ಶಿವಮೊಗ್ಗ ಜಿಲ್ಲಾ ಮೆಗ್ಗಾನ್ ಭೋಧನಾ ಆಸ್ಪತ್ರೆಯ ಕ್ಷ ಕಿರಣ ಕೊಠಡಿಯ ಪಕ್ಕದಲ್ಲಿ ಒಂದು ಕೊಠಡಿಯಲ್ಲಿ ಅನಧೀಕೃತವಾಗಿ ಔಷದಿಗಳನ್ನು ಸಂಗ್ರಹಿಸಿದ್ದು, ಈ ಬಗ್ಗೆ ಶಿವಮೊಗ್ಗ ಜಿಲ್ಲಾ ಮೆಗ್ಗಾನ್ ಭೋಧನಾ ಆಸ್ಪತ್ರೆಯ ಗೋಪಿನಾಥ, ಸಹಾಯಕ ನಿರ್ದೇಶಕರು ಫಾರ್ಮಸಿ ರವರನ್ನು ವಿಚಾರ ಮಾಡಲಾಗಿ ಸದರಿಯವರು ಯಾವುದೇ ಸಮಂಜಸವಾದ ಮಾಹಿತಿಯನ್ನು ಮತ್ತು ದಾಖಲಾತಿಗಳನ್ನು ನೀಡಿರುವುದಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸದರಿ ಔಷದಿಗಳು ದಾಸ್ತಾನು ರಿಜಿಸ್ಟರ್‌ನಲ್ಲಿಯೂ ಸಹ ನಮೂದು ಇಲ್ಲದೆ ಇರುವುದು ಕಂಡು ಬಂದಿದ್ದು. ಸದರಿ ಔಷದಿಗಳ ಮೇಲೆ Not For Sale ಎಂದು ನಮೂದು ಇರುವುದಿಲ್ಲ. ಎಲ್ಲಾ ಔಷದಿಗಳ ಮೇಲೆ ಎಂ.ಆರ್.ಪಿ. ನಮೂದು ಇದ್ದು, ಇದು ಕಾನೂನು ಬಾಹಿರವಾಗಿರುವುದು ಕಂಡು ಬಂದಿರುತ್ತದೆ.

ಈ ಬಗ್ಗೆ ಆಸ್ಪತ್ರೆಯ ಫಾರ್ಮಸಿಸ್ಟ್‌ಗಳು ಸಮಂಜಸವಾದ ಉತ್ತರವನ್ನು ನೀಡಿರುವುದಿಲ್ಲ. ಸದರಿ ಔಷದಿಗಳ ಅಂದಾಜು ಮೌಲ್ಯ ಸುಮಾರು 3.5 ಲಕ್ಷಗಳಾಗುತ್ತದೆ. ಈ ಬಗ್ಗೆ ದಾಖಲಾತಿಗಳನ್ನು ಸಂಗ್ರಹಿಸಿದ್ದು ಮುಂದಿನ ತನಿಖೆ ಕೈಗೊಳ್ಳಲಾಗುತ್ತದೆ ಎಂದು ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಮಂಜುನಾಥ್ ಚೌಧರಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular